ಉಡುಪಿ: ಪಾಕ್ ಗೆ ಭಾರತೀಯ ನೌಕಾಪಡೆಯ ಹಡಗುಗಳ ಗೌಪ್ಯ ಮಾಹಿತಿ ರವಾನೆ; ನಾಲ್ಕನೇ ಆರೋಪಿ ಬಂಧನ!

ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ ಮೂಲದ ಅಲಿಫ್ ಇಸ್ಲಾಂ (21) ಎಂದು ಗುರುತಿಸಲಾಗಿದೆ. ಸದ್ಯ ಕೇರಳದ ಇಡುಕ್ಕಿ ಜಿಲ್ಲೆಯ ಮರಯೂರ್ ಗ್ರಾಮದಲ್ಲಿ ನೆಲೆಸಿದ್ದ ಎಂದು ಅವರು ಮಾಹಿತಿ ನೀಡಿದ್ದಾರೆ.
Casual Images
ಸಾಂದರ್ಭಿಕ ಚಿತ್ರ
Updated on: 

ಉಡುಪಿ: ಭಾರತೀಯ ನೌಕಾಪಡೆಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು ಬಂಧಿತರ ಸಂಖ್ಯೆ 4 ಕ್ಕೆ ಏರಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ ಮೂಲದ ಅಲಿಫ್ ಇಸ್ಲಾಂ (21) ಎಂದು ಗುರುತಿಸಲಾಗಿದೆ. ಸದ್ಯ ಕೇರಳದ ಇಡುಕ್ಕಿ ಜಿಲ್ಲೆಯ ಮರಯೂರ್ ಗ್ರಾಮದಲ್ಲಿ ನೆಲೆಸಿದ್ದ ಎಂದು ಅವರು ಮಾಹಿತಿ ನೀಡಿದ್ದಾರೆ.

ಭಾರತೀಯ ನೌಕಾಪಡೆಯ ಹಡಗುಗಳ ರಹಸ್ಯ ಮಾಹಿತಿ ಸೋರಿಕೆಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಅನುಮತಿಯಿಲ್ಲದೆ ಪಾಕಿಸ್ತಾನದಲ್ಲಿರುವವರೊಂದಿಗೆ ವಾಟ್ಸಾಪ್ ಮತ್ತು ಫೇಸ್‌ಬುಕ್ ಮೂಲಕ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

Casual Images
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ಹಡಗುಗಳ ಗೌಪ್ಯ ಮಾಹಿತಿ ರವಾನೆ: ಉಡುಪಿಯಲ್ಲಿ ಮಧ್ಯಪ್ರದೇಶ ಮೂಲದ ಇಬ್ಬರ ಬಂಧನ

ನೌಕಾಪಡೆಗೆ ಸಂಬಂಧಿಸಿದ ಮಾಹಿತಿಯನ್ನು ಅಕ್ರಮವಾಗಿ ಸೋರಿಕೆ ಮಾಡಲಾಗಿದೆ ಎಂಬ ದೂರಿನ ಮೇರೆಗೆ 2025 ರಲ್ಲಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣ ಸಂಬಂಧ ನವೆಂಬರ್ 2025 ರಲ್ಲಿ ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬ ಇಬ್ಬರು ಆರೋಪಿಗಳನ್ನು ಕಸ್ಟಡಿಗೆ ತೆಗೆದುಕೊಳ್ಳಲಾಯಿತು. ತದನಂತರ ಗುಜರಾತ್‌ನ ಹಿರೇಂದ್ರ ಕುಮಾರ್ ಅವರನ್ನು ಡಿಸೆಂಬರ್ 2025 ರಲ್ಲಿ ಬಂಧಿಸಲಾಗಿತ್ತು. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com