ಬಾಲ್ ಎಂದುಕೊಂಡು ಬಾಂಬ್ ನೊಂದಿಗೆ ಕ್ರಿಕೆಟ್, ಬ್ಯಾಟ್ ಗೆ ತಾಗುತ್ತಲೇ ಸ್ಫೋಟ: ಬಾಲಕನಿಗೆ ಗಾಯ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ‌ ಬಂದಾರು ಗ್ರಾಮದಲ್ಲಿ ಚೆಂಡಿನ ಆಕಾರದ ವಸ್ತುವೊಂದು ಸ್ಫೋಟಗೊಂಡು ಓರ್ವ ಬಾಲಕ ಗಾಯಗೊಂಡಿದ್ದಾನೆ.
Ball-Shaped Object Explodes After Boy Hits It With Bat
ಬಾಲ್ ಎಂದುಕೊಂಡು ಬಾಂಬ್ ನೊಂದಿಗೆ ಕ್ರಿಕೆಟ್ (ಸಾಂದರ್ಭಿಕ ಚಿತ್ರ)
Updated on

ಮಂಗಳೂರು: ಚೆಂಡಿನಾಕಾರದ ಶಂಕಿತ ಬಾಂಬ್ ರೀತಿಯ ವಸ್ತುವಿನೊಂದಿಗೆ ಕ್ರಿಕೆಟ್ ಆಡಲು ಹೋದ ಬಾಲಕನೋರ್ವ ಗಾಯಗೊಂಡ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ‌ ಬಂದಾರು ಗ್ರಾಮದಲ್ಲಿ ಚೆಂಡಿನ ಆಕಾರದ ವಸ್ತುವೊಂದು ಸ್ಫೋಟಗೊಂಡು ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸದ್ಯ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆಯಲ್ಲಿ ಅಭೀಶ್​ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಸದ್ಯ ಬಾಲಕ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸದ್ಯ ಘಟನೆಯಿಂದ ಜನರಲ್ಲಿ ಆತಂಕ ಶುರುವಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 9(B), 1(b) ಸ್ಫೋಟಕಗಳ ಕಾಯ್ದೆ, 125 A BNS ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ಮೇಲ್ನೋಟಕ್ಕೆ ಇದು ಕಾಡು ಹಂದಿ ಬೇಟೆ ಆಡಲು ಇಟ್ಟಿದ್ದ ಬಾಂಬ್​ ಎಂದು ಶಂಕಿಸಲಾಗಿದೆ.

Ball-Shaped Object Explodes After Boy Hits It With Bat
112 ಹೊಯ್ಸಳ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ; ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯ ರಕ್ಷಣೆ

ನಡೆದಿದ್ದೇನು?

ಬಾಲಕ ಅಭೀಶ್ ಮನೆ ಅಂಗಳದಲ್ಲಿ ಆಟ ಆಡುತ್ತಿದ್ದ. ಈ ವೇಳೆ ಚೆಂಡಿನಾಕಾರದ ವಸ್ತು ಪತ್ತೆಯಾಗಿದೆ. ಬಾಲ್ ರೀತಿ ಇದ್ದ ಬಾಂಬ್​​ನಿಂದ ಮಕ್ಕಳು ಕ್ರಿಕೆಟ್ ಆಡಿದ್ದಾರೆ. ಓರ್ವ ಬಾಲಕ ಪತ್ತೆಯಾದ ಚೆಂಡಿನಾಕಾರದ ವಸ್ತುವನ್ನು ಬೌಲ್ ಮಾಡಿದ್ದು, ಅಭೀಶ್ ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್ ಆಗಿದೆ. ಈ ವೇಳೆ ಅಭೀಶ್​ಗೆ ಸಣ್ಣಪುಟ್ಟ ಗಾಯಗಳಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com