ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತಲೂ ಅಧಿಕ ಬಿಸಿಲು, ಮಾರ್ಚ್'ನಿಂದ ತಾಪಮಾನ ಮತ್ತಷ್ಟು ಏರಿಕೆ: IMD ಎಚ್ಚರಿಕೆ

2026ರ ಮಾರ್ಚ್‌ನಿಂದ ಮೇ ಅವಧಿಯಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಲಿದ್ದು, ಕೇರಳ ಮತ್ತು ತಮಿಳುನಾಡು ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ವಾಡಿಕೆಗಿಂತಲೂ ಬಿಸಲು ಹೆಚ್ಚಾಗುವ ಸಾಧ್ಯತೆ ಇದೆ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಕರ್ನಾಟಕದಲ್ಲಿ ಫೆಬ್ರವರಿ ತಿಂಗಳಿನಲ್ಲೇ ತಾಪಮಾನ ಹೆಚ್ಚಾಗಿದ್ದು, ಈ ನಡುವೆಯೇ, ಮಾರ್ಚ್‌ನಿಂದ ಮೇ ತಿಂಗಳವರೆಗೆ ರಾಜ್ಯದಲ್ಲಿ ಬಿಸಿಲಿನ ಬೇಗೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

2026ರ ಮಾರ್ಚ್‌ನಿಂದ ಮೇ ಅವಧಿಯಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಲಿದ್ದು, ಕೇರಳ ಮತ್ತು ತಮಿಳುನಾಡು ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ವಾಡಿಕೆಗಿಂತಲೂ ಬಿಸಲು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಉತ್ತರ ಒಳನಾಡು ಕರ್ನಾಟಕದ ಬಹುತೇಕ ಭಾಗಗಳಿಗೆ ಮಾರ್ಚ್–ಮೇ ಅವಧಿಯಲ್ಲಿ ಉಷ್ಣ ಅಲೆ (ಹೀಟ್‌ವೇವ್) ತೀವ್ರಗೊಳ್ಳುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಿದೆ.

ಪ್ರಸ್ತುತ ಹೆಚ್ಚಾಗಿರುವ ತಾಪಮಾನವು 3 ರಿಂದ 6 ದಿನಗಳವರೆಗೆ ಮುಂದುವರಿಯುವ ಸಾಧ್ಯತೆ ಇದ್ದು, ನಂತರ ಕಡಿಮೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.

File photo
ಈ ವರ್ಷ ಬೇಸಿಗೆಯಲ್ಲಿ ತಾಪಮಾನ ಸಾಮಾನ್ಯಕ್ಕಿಂತ 1-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ!

ಈ ನಡುವೆ ಕರಾವಳಿ ಮತ್ತು ಉತ್ತರ ಒಳನಾಡು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನವೂ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮಾಹಿತಿ ನೀಡಿದೆ.

ಮಾರ್ಚ್‌ನಿಂದ ಮೇವರೆಗೆ ಸಂಪೂರ್ಣ ಕರ್ನಾಟಕದಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚು ಇರುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದಲ್ಲಿ ಗರಿಷ್ಠ ತಾಪಮಾನ ಶೇಕಡಾ 65 ರಿಂದ 75 ರಷ್ಟು ಹೆಚ್ಚಾಗುವ ಸಾಧ್ಯತೆ ಎಂದು ಐಎಂಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ನಡುವೆ ಹವಾಮಾನ ತಜ್ಞರು ಫೆಬ್ರವರಿಯಲ್ಲೇ ಉಷ್ಣತೆ ಏರಿಕೆಯಾಗುತ್ತಿರುವುದನ್ನು ಗಮನಿಸಿದ್ದು, ಮುಂದಿನ ತಿಂಗಳುಗಳಲ್ಲಿ ಇದು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ನಾಗರಿಕರು ಈ ಅವಧಿಯಲ್ಲಿ ಎಚ್ಚರಿಕೆಯಿಂದ ಇರಬೇಕು ಎಂದು ಐಎಂಡಿ ಸಲಹೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com