

ಬಾಗಲಕೋಟೆ: ರಾಜ್ಯದಲ್ಲಿ ಭೀಕರ ಅಪಘಾತ ಘಟನೆ ಮುಂದುವರಿದಿದೆ. ಜಿಲ್ಲೆಯ ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಸಮೀಪ ಇಂದು ಶನಿವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮೃತರನ್ನು ಮನೀಷ್ ಪಾಂಡೆ (23ವ), ಹಲಕಿ ಪಾಂಡೆ (2ವ), ಲಕ್ಷ್ಮಿ ಚಿರಮಡಿ (27ವ) ಹಾಗೂ ರೇಖಾ ಭೂಕೆ ಎಂದು ಗುರುತಿಸಲಾಗಿದೆ. ಮೃತರು ಮಹಾರಾಷ್ಟ್ರ ರಾಜ್ಯದ ಯುವತ್ಮಾಳ್ ಜಿಲ್ಲೆಯ ಬೂಸಾ ತಾಲ್ಲೂಕಿನ ಗುಪವಾಡಿ ನಿವಾಸಿಗಳಾಗಿದ್ದು, ಕಬ್ಬಿನ ಕಟಾವು ಕೆಲಸಕ್ಕಾಗಿ ಜಮಖಂಡಿ ಭಾಗಕ್ಕೆ ಆಗಮಿಸಿದ್ದರು.
ಘಟನಾ ಸ್ಥಳಕ್ಕೆ ಜಮಖಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Advertisement