5 ಲಕ್ಷ ರೂ ಲಂಚ ಪಡೆಯುತ್ತಿದ್ದಾಗಲೇ BJP ಶಾಸಕ ಚಂದ್ರು ಲಮಾಣಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ!

ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ 5 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
BJP MLA Chandru Lamani Caught by Lokayukta
ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ
Updated on

ಗದಗ: ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ 5 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಶಾಸಕ ಚಂದ್ರು ಲಮಾಣಿ ಸ್ವತಃ ವೈದ್ಯರು ಕೂಡ ಆಗಿದ್ದು ಬಾಲಾಜಿ ಆಸ್ಪತ್ರೆ ಚಂದ್ರು ಲಮಾಣಿ ಅವರ ಒಡೆತನ ಆಸ್ಪತ್ರೆಯಾಗಿದೆ. ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಪಿಎಗಳಾದ ಮಂಜುನಾಥ್ ಹಾಗೂ ಗುರುನಾಯಕ್ ಸಹ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸದ್ಯ ಮೂವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅಧಿಕೃತ ಹೇಳಿಕೆಯ ಪ್ರಕಾರ, ರಸ್ತೆಯ ಎರಡೂ ಬದಿಗಳಲ್ಲಿ ತಡೆಗೋಡೆ ನಿರ್ಮಿಸುವ ಸಣ್ಣ ನೀರಾವರಿ ಇಲಾಖೆಯ ಕೆಲಸವನ್ನು ನಿರ್ವಹಿಸಲು ಗದಗದ ಚಿಂಚೋಳಿಯ ಕ್ಲಾಸ್-1 ಗುತ್ತಿಗೆದಾರ ವಿಜಯ್ ಪೂಜಾರ್ ಅವರಿಂದ ಚಂದ್ರು ಲಮಾಣಿ 11 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

BJP MLA Chandru Lamani Caught by Lokayukta
ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಗೆ ಫೆಬ್ರವರಿ 26ವರೆಗೆ ನ್ಯಾಯಾಂಗ ಬಂಧನ

ಆದರೆ ಈ ಬಗ್ಗೆ ದೂರುದಾರರು ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿದರು. ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ದೂರು ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ ಆರೋಪಿಗಳನ್ನು 5 ಲಕ್ಷ ರೂ. ಲಂಚ ಪಡೆಯುವಾಗ ಬಂಧಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com