ಕಮಲಾಕರ ಭಟ್​​ಗೆ ಮತ್ತೊಂದು ಶಾಕ್; ಜ್ಯೋತಿಷಿ ವಿರುದ್ಧ ಪೋಕ್ಸೋ ಕೇಸ್ ದಾಖಲು!

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಮಲಾಕರ ಭಟ್ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.
Kamalakara Bhat booked under POCSO Act for alleged sexual abuse of girl
ಕಮಲಾಕರ ಭಟ್
Updated on

ಕಾರವಾರ: ಸುಚಿತ್ರಾಳ ಸಹವಾಸ ಮಾಡಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರವ ಜ್ಯೋತಿಷಿ ಕಮಲಾಕರ ಭಟ್​​ಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಮಲಾಕರ ಭಟ್ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.

ಶಿವಮೊಗ್ಗ ಜಿಲ್ಲೆಯ ತುಂಗಾನಗರದಲ್ಲಿ ಅಪ್ರಾಪ್ತ ಬಾಲಕಿಯ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಮಲಾಕರ ಭಟ್ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Kamalakara Bhat booked under POCSO Act for alleged sexual abuse of girl
ಉತ್ತರ ಕನ್ನಡ: ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ; ದೂರು ನೀಡಿದ್ದಕ್ಕೆ ಹತ್ಯೆ; ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ

ಕಮಲಾಕರ್ ಭಟ್ ಅವರು ಸುಚಿತ್ರಾ ಎಂಬ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದರು. ವಿಚಾರವಾಗಿ ನಡೆದ ಗಲಾಟೆ ವೇಳೆ ಸುಚಿತ್ರಾ ಗಂಡನ ಸಹೋದರ ವಸಂತ್ ನಾಯ್ಕ ಕೊಲೆಯಾಗಿದ್ದು, ಜ್ಯೋತಿಷಿ ಸದ್ಯ ಜೈಲು ಸೇರಿದ್ದಾರೆ.

ವಸಂತ್ ನಾಯ್ಕ್ ಕೊಲೆ ಬಳಿಕ ಎಸ್ಕೇಪ್ ಆಗಲು ಯತ್ನಿಸಿದ ಜೋತಿಷಿ ಕಮಲಾಕರ ಭಟ್ ಮತ್ತು ಸುಚಿತ್ರಾ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com