ರಾಮನಗರ: ಶೀಲ ಶಂಕಿಸಿ ಜಗಳ, ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಪತಿ!

ಮೃತ ಮಹಿಳೆಯನ್ನು 21 ವರ್ಷದ ಸಿಂಚನಾ ಎಂದು ಗುರುತಿಸಲಾಗಿದೆ. ಆಕೆಯ ಪತಿ ರೇಣುಕಯ್ಯ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ನಿಯ ಶೀಲ ಶಂಕಿಸಿ ರೇಣುಕಯ್ಯ ಆಗಾಗ್ಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.
Accused Ranukaiah
ಆರೋಪಿ ರೇಣುಕಯ್ಯ
Updated on

ರಾಮನಗರ: ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕುಳ್ಳೇಗೌಡನಪಾಳ್ಯದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು 21 ವರ್ಷದ ಸಿಂಚನಾ ಎಂದು ಗುರುತಿಸಲಾಗಿದೆ. ಆಕೆಯ ಪತಿ ರೇಣುಕಯ್ಯ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ನಿಯ ಶೀಲ ಶಂಕಿಸಿ ರೇಣುಕಯ್ಯ ಆಗಾಗ್ಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.

ಶುಕ್ರವಾರವೂ ಮದ್ಯ ಸೇವಿಸಿ ಬಂದು ಆಕೆಯೊಂದಿಗೆ ಜಗಳವಾಡಿದ್ದಾನೆ. ಮಾತಿಗೆ ಮಾತು ಬೆಳೆದು ಮನೆ ಮುಂದೆ ಬಿದ್ದಿದ್ದ ಕಲ್ಲನ್ನು ತಂದು ಆಕೆಯ ತಲೆಗೆ ಹೊಡೆದ್ದಾನೆ. ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

Accused Ranukaiah
ಲವ್, ಸೆಕ್ಸ್, ಗರ್ಭಿಣಿಯಾದ 'ಗರ್ಲ್ ಫ್ರೆಂಡ್' ಕೊಂದು ಬಾವಿಗೆ ಎಸೆದ ಪ್ರಿಯಕರ!

ಘಟನೆ ನಡೆದ ತಕ್ಷಣ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮಾಹಿತಿ ಪಡೆದ ಕಗ್ಗಲಿಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com