ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ; ಕೊನೆಗೂ ಪುಂಡಾನೆ ಸೆರೆ, ಸ್ಥಳೀಯರ ಪ್ರತಿಭಟನೆ!

ಕೆಲ ದಿನಗಳ ಹಿಂದಷ್ಟೇ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಆನೆ ದಾಳಿಗೆ ಬಲಿಯಾದ ಬೆನ್ನಲ್ಲೇ ಅದೇ ಕಾಫಿತೋಟದಲ್ಲಿ ಕಾಡಾನೆ ದಾಳಿಗೆ ಇನ್ನೊಂದು ಜೀವ ಬಲಿಯಾಗಿದೆ.
Rogue Elephant Finally Captured
ಕಾಡಾನೆ ಸೆರೆ
Updated on

ಚಿಕ್ಕಮಗಳೂರು: ಚಿಕ್ಕಮಗಳೂರಿನ ಕಾಫಿ ಎಸ್ಟೇಟ್ ಗಳಲ್ಲಿ ವ್ಯಾಪಕ ಆತಂಕ ಮೂಡಿಸಿದ್ದ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಕೊನೆಗೂ ಅರಣ್ಯ ಇಲಾಖೆ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಕೆಲ ದಿನಗಳ ಹಿಂದಷ್ಟೇ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಆನೆ ದಾಳಿಗೆ ಬಲಿಯಾದ ಬೆನ್ನಲ್ಲೇ ಅದೇ ಕಾಫಿತೋಟದಲ್ಲಿ ಕಾಡಾನೆ ದಾಳಿಗೆ ಇನ್ನೊಂದು ಜೀವ ಬಲಿಯಾಗಿದೆ. ಹೊಸಪೇಟೆ ಮೂಲದ ಬೋರಮ್ಮ (34) ಕಾಡಾನೆ ದಾಳಿಯಲ್ಲಿ ಮೃತಪಟ್ಟ ಕಾರ್ಮಿಕ ಮಹಿಳೆ.

ಬಾಳೆಹೊನ್ನೂರು, ಎನ್.ಆರ್.ಪುರ ತಾಲ್ಲೂಕಿನಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ತೀವ್ರಗೊಂಡಿತ್ತು. ನಾಗರಹೊಳೆಯ ಸಿಬ್ಬಂದಿ, ಜೂನಿಯರ್ ಅರ್ಜುನ ಸೇರಿದಂತೆ ಏಳು ಪಳಗಿದ ಆನೆಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವು.

ಅರಣ್ಯ ಅಧಿಕಾರಿಗಳು ಕರ್ನಾಟಕದ ಚಿಕ್ಕಮಗಳೂರಿನಲ್ಲಿ ಏಳು ತರಬೇತಿ ಪಡೆದ ಆನೆಗಳು (ಕುಮ್ಕಿಗಳು) ಮತ್ತು ಸುಮಾರು 75 ಸಿಬ್ಬಂದಿಗಳನ್ನು ಒಳಗೊಂಡ ಪ್ರಮುಖ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.

Rogue Elephant Finally Captured
ಫೆಬ್ರವರಿ 21 ರಿಂದ ಸಫಾರಿ ಪುನಾರಂಭ: ಷರತ್ತು ಕಟ್ಟುನಿಟ್ಟಿನ ಪಾಲನೆಗೆ Eshwar Khandre ಸೂಚನೆ

ಮತ್ತೊಂದು ಬಲಿ

ನಾಗೇಶ್ ಗೌಡ ಅವರಿಗೆ ಸೇರಿದ ಕಾಫಿ ತೋಟದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಬೋರಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದೇ ತೋಟದಲ್ಲಿ ಕಳೆದ ಏಳು ದಿನಗಳ ಹಿಂದೆ ಹಾವೇರಿ ಮೂಲದ ಕಾರ್ಮಿಕ ಯಲ್ಲಪ್ಪ ಎಂಬವರು ಕೂಡ ಕಾಡಾನೆ ದಾಳಿಗೆ ಬಲಿಯಾಗಿದ್ದರು.

ಏಳು ದಿನಗಳ ಅಂತರದಲ್ಲಿ ಎರಡನೇ ಬಲಿ ಸಂಭವಿಸಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಕಾಫಿ ತೋಟಗಳಿಗೆ ಕೆಲಸಕ್ಕೆ ತೆರಳಬಾರದು ಎಂದು ಅರಣ್ಯ ಇಲಾಖೆ ಮುನ್ನೆಚ್ಚರಿಕೆ ಸೂಚನೆ ನೀಡಿದ್ದರೂ, ಜೀವನೋಪಾಯದ ಅನಿವಾರ್ಯತೆಯಿಂದ ಕಾರ್ಮಿಕರು ತೋಟಗಳಿಗೆ ತೆರಳುತ್ತಿರುವುದು ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ.

ಕೊನೆಗೂ ಪುಂಡಾನೆ ಸೆರೆ

ಏಳು ಕುಮ್ಕಿ ಆನೆಗಳು ಹಾಗೂ ಸುಮಾರು 75 ಸಿಬ್ಬಂದಿಗಳ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಹಿಳೆಗೆ ದಾಳಿ ನಡೆಸಿದ ಸ್ಥಳದಿಂದ ಅಲ್ಪ ದೂರದಲ್ಲಿರುವ ಕಾಫಿ ತೋಟದಲ್ಲಿ ಕಾಡಾನೆಯನ್ನು ಪತ್ತೆ ಮಾಡಲಾಯಿತು. ಸೂಕ್ತ ಸಮಯದಲ್ಲಿ ಅರವಳಿಕೆ ಚುಚ್ಚುಮದ್ದು ನೀಡಿ ಆನೆಯನ್ನು ಅಚೇತನಗೊಳಿಸಿ, ಬಳಿಕ ಕುಮ್ಕಿ ಆನೆಗಳ ಸಹಾಯದಿಂದ ಕಾಡಾನೆಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ಪಡೆದು ಸೆರೆ ಹಿಡಿಯಲಾಗಿದೆ.

Rogue Elephant Finally Captured
ಆಡಿಯೋ ಕ್ಲಿಪ್ ನಿಜ ಆದರೆ, ಇತರೆ ಆರೋಪಗಳು ಸುಳ್ಳು: ಪೊಲೀಸರು

ಗ್ರಾಮಸ್ಥರ ಆಕ್ರೋಶ, ಪ್ರತಿಭಟನೆ

ಈ ಮಧ್ಯೆ ಮಹಿಳೆಯ ಮೃತದೇಹವನ್ನು ಸಾಗಿಸುತ್ತಿದ್ದ ವಾಹನವನ್ನು ಚಿಕ್ಕಮಗಳೂರು ತಾಲೂಕಿನ ಕಡಬಗೆರೆ ಗ್ರಾಮದಲ್ಲಿ ಸ್ಥಳೀಯರು ತಡೆದು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ಮಧ್ಯೆ ಶವವಿಟ್ಟು ಪ್ರತಿಭಟನೆ ನಡೆಸಿದ ನೂರಾರು ಗ್ರಾಮಸ್ಥರು ಪೀಡಿತ ಕುಟುಂಬಕ್ಕೆ ಸಮರ್ಪಕ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com