

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಐಷಾರಾಮಿ ವಸ್ತುಗಳನ್ನು ಬಳಸುತ್ತಿರುವ ವಿಷಯ ಬಹಿರಂಗವಾಗಿದ್ದು, ಇತ್ತೀಚೆಗೆ ಅಧಿಕಾರಿಗಳ ತನಿಖೆ ವೇಳೆ ಬಹಿರಂಗವಾಗಿದೆ. ಜೈಲು ಐಷಾರಾಮಿ ಫೈವ್ ಸ್ಟಾರ್ ಹೋಟೆಲ್ ಆಗಿ ಮಾರ್ಪಟ್ಟಿದೆ ಎಂಬ ಆರೋಪಗಳು ಕೇಳಿಬರುತ್ತಿದೆ.
ಕೈದಿಗಳ ಬಳಿ ಇದ್ದ ಫೋನ್, ಸಿಮ್ ಕಾರ್ಡ್‌ಗಳು, ಚಾರ್ಜರ್‌ಗಳು, ಇಯರ್‌ಫೋನ್‌ಗಳು, ವಿವಿಧ ಬಗೆಯ ಶೂಗಳು, ದಿಂಬುಗಳು, ಪಾತ್ರೆಗಳು, ಅಡುಗೆ ಸಾಮಗ್ರಿಗಳು ಮತ್ತು ಚೇರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುಮಾರು ಎರಡು ಟ್ರ್ಯಾಕ್ಟರ್ ಲೋಡ್‌ನಷ್ಟು ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಇವುಗಳಲ್ಲಿ ಹಲವನ್ನು ನಾಶಪಡಿಸಲಾಗಿದೆ. ಜೈಲಿನಲ್ಲಿರುವ ಕೆಲವು ಅಧಿಕಾರಿಗಳ ಸಹಕಾರದಿಂದಲೇ ಕೈದಿಗಳಿಗೆ ಬೇಕಾದ ವಸ್ತುಗಳು ಪೂರೈಕೆಯಾಗುತ್ತಿವೆ ಎಂಬ ಆರೋಪಗಳು ಕೇಳಿಬರುತ್ತಿವೆ.
ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಫೋನ್, ಮದ್ಯ, ಸಿಗರೇಟ್ ಸೇರಿದಂತೆ ಐಷಾರಾಮಿ ಸೌಲಭ್ಯಗಳು ಸಿಗುತ್ತಿವೆ ಎಂಬ ಆರೋಪದಲ್ಲಿ ಬಳ್ಳಾರಿ ಜೈಲಿಗೆ ವರ್ಗಾಯಿಸಿ ನಂತರ ಸುಪ್ರೀಂ ಕೋರ್ಟ್ ಜೈಲು ಪರಿಸ್ಥಿತಿ ಕುರಿತು ತರಾಟೆಗೆ ತೆಗೆದುಕೊಂಡಿದ್ದರೂ, ಪರಿಸ್ಥಿತಿ ಸುಧಾರಣೆಯಾದಂತೆ ಕಂಡುಬರುತ್ತಿಲ್ಲ,
Advertisement