ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್; ಜಾಮೀನು ಮಂಜೂರು

ಜಾಮೀನು ಕೋರಿ ಮ್ಯೂಸಿಕ್ ಮೈಲಾರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶೆ ಪ್ರೀತಿ ಸಗರ ಜೋಶಿ ಅವರು, ಕೆಲ ಷರತ್ತುಗಳನ್ನು ವಿಧಿಸಿ ಇಂದು ಆರೋಪಿಗೆ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ.
Music Mylari
ಮ್ಯೂಸಿಕ್ ಮೈಲಾರಿ
Updated on

ಬಾಗಲಕೋಟೆ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಉತ್ತರ ಕರ್ನಾಟಕದ ಜಾನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ‘ಮ್ಯೂಸಿಕ್ ಮೈಲಾರಿ’ಗೆ ಕೊನೆಗೂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ಮ್ಯೂಸಿಕ್ ಮೈಲಾರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶೆ ಪ್ರೀತಿ ಸಗರ ಜೋಶಿ ಅವರು, ಕೆಲ ಷರತ್ತುಗಳನ್ನು ವಿಧಿಸಿ ಇಂದು ಆರೋಪಿಗೆ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ.

ಒಂದು ಲಕ್ಷ ರೂ. ಶ್ಯುರಿಟಿ ಬಾಂಡ್, ಪ್ರಾಷಿಕ್ಯೂಷನ್‌ ಮೇಲೆ ಪ್ರಭಾವ ಬೀರಬಾರದು ಮತ್ತು ಇದೇ ತರಹದ ಅಪರಾಧವನ್ನು ಮತ್ತೆ‌ ಮಾಡಬಾರದು ಎನ್ನುವ ಷರತ್ತುಗಳನ್ನು ಮ್ಯೂಸಿಕ್ ಮೈಲಾರಿಗೆ ವಿಧಿಸಲಾಗಿದೆ. ಇದರೊಂದಿಗೆ ಕಳೆದ ಡಿಸೆಂಬರ್​​ನಿಂದ ಜೈಲು ಪಾಲಾಗಿದ್ದ ಮೈಲಾರಿಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ.

Music Mylari
ಲೈಂಗಿಕ ದೌರ್ಜನ್ಯ ಪ್ರಕರಣ: ಮ್ಯೂಸಿಕ್ ಮೈಲಾರಿ ಜಾಮೀನು ಅರ್ಜಿ ವಜಾ; ಜಾನಪದ ಗಾಯಕನಿಗೆ ಜೈಲೇ ಗತಿ

ಆರ್ಕೆಸ್ಟ್ರಾ ಕಾರ್ಯಕ್ರಮದ ನಂತರ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮ್ಯೂಸಿಕ್ ಮೈಲಾರಿಯನ್ನು ಡಿಸೆಂಬರ್ 17 ರಂದು ಮಹಾಲಿಂಗಪುರ ಪೊಲೀಸರು ಬಂಧಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ ಸೇರಿ 6 ಜನರ ವಿರುದ್ಧ ಪೋಕ್ಸೋ ಕೇಸ್‌ ದಾಖಲಾಗಿದೆ. ಈ ಘಟನೆ ಅಕ್ಟೋಬರ್‌ 24 ರಂದು ಬೆಳಗಾವಿಯಲ್ಲಿ ನಡೆದಿದ್ದು, ಅಪ್ರಾಪ್ತ ಬಾಲಕಿ ಬೆಳಗಾವಿ ಮೂಲದವಳು ಎಂದು ತಿಳಿದುಬಂದಿದೆ.

ಅಕ್ಬೋಬರ್ 24ರಂದು ಬೆಳಗಾವಿ ಜಿಲ್ಲೆಯ ಒಂದು ಗ್ರಾಮದಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡಲು ಮ್ಯೂಸಿಕ್ ಮೈಲಾರಿ ಬಂದಿದ್ದರು. ಇದೇ ಆರ್ಕೆಸ್ಟ್ರಾದಲ್ಲಿ ನೃತ್ಯ ಮಾಡಲು ಅಪ್ರಾಪ್ತ ಬಾಲಕಿ ಸಹ ಬಂದಿದ್ದಳು. ಕಾರ್ಯಕ್ರಮ ಮುಗಿದ ಬಳಿಕ ಆಕೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದ್ದು, ಅದರ ವಿಡಿಯೋ ಸಹ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com