ED ದಾಳಿ ಭೀತಿ, ಉದ್ಯಮಿ CJ Roy ರೀತಿಯಲ್ಲೇ BBMP ನಿವೃತ್ತ ಎಂಜಿನಿಯರ್ ಆತ್ಮಹತ್ಯೆಗೆ ಶರಣು!

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಮಾದರಿಯಲ್ಲೇ ಬಿಬಿಎಂಪಿಯ ನಿವೃತ್ತ ಮುಖ್ಯ ಇಂಜಿನಿಯರ್ ಪರಮೇಶ್ವರಯ್ಯ ಇಂದು ಬೆಳ್ಳಂಬೆಳಗ್ಗೆ ಕೋರಮಂಗಲದ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
BBMP retired chief engineer commits suicide due to fear of ED raid
ಜಾರಿ ನಿರ್ದೇಶನಾಲಯ (ಸಾಂದರ್ಭಿಕ ಚಿತ್ರ)
Updated on

ಬೆಂಗಳೂರು: ಜಾರಿ ನಿರ್ದೇಶನಾಲಯದ (ED) ದಾಳಿ ಮತ್ತು ವಿಚಾರಣೆಯ ಭೀತಿ ಬೆಂಗಳೂರಿನಲ್ಲಿ ಮತ್ತೊಂದು ಬಲಿ ಪಡೆದಿದ್ದು, BBMP ನಿವೃತ್ತ ಎಂಜಿನಿಯರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಮಾದರಿಯಲ್ಲೇ ಬಿಬಿಎಂಪಿಯ ನಿವೃತ್ತ ಮುಖ್ಯ ಇಂಜಿನಿಯರ್ ಪರಮೇಶ್ವರಯ್ಯ ಇಂದು ಬೆಳ್ಳಂಬೆಳಗ್ಗೆ ಕೋರಮಂಗಲದ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಂದು ಅವರು ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಅದಕ್ಕೂ ಮೊದಲೇ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪರಮೇಶ್ವರಯ್ಯ ತಮ್ಮ ಕೋರಮಂಗಲ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇತ್ತೀಚೆಗೆ ನಡೆದ ಇಡಿ ದಾಳಿಯ ನಂತರ ಅವರು ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.

BBMP retired chief engineer commits suicide due to fear of ED raid
ಬೆಂಗಳೂರು: GST ಅಧಿಕಾರಿಗಳೆಂದು ಹೇಳಿಕೊಂಡು 5 ಲಕ್ಷ ರೂ ಸುಲಿಗೆ; ಇಬ್ಬರು ಹೌಸ್‌ಕೀಪಿಂಗ್ ಸಿಬ್ಬಂದಿ ಬಂಧನ!

ಯಾರು ಈ ಪರಮೇಶ್ವರಯ್ಯ?

ಬಿಬಿಎಂಪಿಯ ಮಹಾದೇವಪುರ ವಲಯದಲ್ಲಿ ಮುಖ್ಯ ಇಂಜಿನಿಯರ್ ಆಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಪರಮೇಶ್ವರಯ್ಯ (ಪರಮೇಶ್ವರ್), ಕೋರಮಂಗಲದಲ್ಲಿ ವಾಸವಿದ್ದರು. ಕಳೆದ 20 ದಿನಗಳ ಹಿಂದೆಯಷ್ಟೇ ಇವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಈ ದಾಳಿಯ ನಂತರ ಪರಮೇಶ್ವರಯ್ಯ ಅವರು ತೀವ್ರವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗಿದೆ.

ಪರಮೇಶ್ವರಯ್ಯ ಅವರಿಗೆ ಇಂದು (ಫೆಬ್ರವರಿ 25) ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಇಂದು ಬೆಳಗ್ಗೆ ವಿಚಾರಣೆಗೆ ಹೋಗಬೇಕಿದ್ದ ಅವರು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗ್ಗ ತಂದು ನೇಣು ಬಿಗಿದುಕೊಂಡಿದ್ದಾರೆ.

ಇಡಿ ವಿಚಾರಣೆಯ ವೇಳೆ ಎದುರಿಸಬೇಕಾದ ಪ್ರಶ್ನೆಗಳು ಮತ್ತು ಅದರಿಂದ ಉಂಟಾಗಬಹುದಾದ ಕಾನೂನು ಸಂಕಷ್ಟಗಳಿಗೆ ಹೆದರಿ ಅವರು ಈ ತೀವ್ರ ನಿರ್ಧಾರ ಕೈಗೊಂಡಿದ್ದಾರೆ ಎಂದು ಶಂಕಿಸಲಾಗಿದೆ.

BBMP retired chief engineer commits suicide due to fear of ED raid
ಹಾರ್ಡ್‌ವೇರ್ ಗೋಡೌನ್ ನಲ್ಲಿ ಅಗ್ನಿದುರಂತ: ನಂದಿಸಲು ಹೋದ ಅಗ್ನಿಶಾಮಕ ಸಿಬ್ಬಂದಿಗೂ ಗಾಯ!

ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದ ಪರಮೇಶ್ವರಯ್ಯ

ಇಡಿ ದಾಳಿಯ ನಂತರ ಪರಮೇಶ್ವರಯ್ಯ ಅವರು ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಮನೆಯವರ ಜೊತೆ ಹೆಚ್ಚು ಮಾತನಾಡುತ್ತಿರಲಿಲ್ಲ ಮತ್ತು ಪದೇ ಪದೇ ಇಡಿ ಪ್ರಕರಣದ ಬಗ್ಗೆಯೇ ಚಿಂತಿಸುತ್ತಿದ್ದರು. ಇದೇ ಕಾರಣಕ್ಕೆ ಅವರು ಇತ್ತೀಚೆಗೆ ಮನೋವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಕೂಡ ಪಡೆದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಅವರ ಮಗ ಪ್ರಸ್ತುತ ಆಸ್ಟ್ರೇಲಿಯಾದಲ್ಲಿದ್ದು, ತಂದೆಯ ಸಾವಿನ ಸುದ್ಧಿ ಕೇಳಿ ಆಘಾತಕ್ಕೊಳಗಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com