ದ್ವೇಷ ಭಾಷಣ ಆರೋಪ; ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಫೆಬ್ರುವರಿ 21 ರಂದು ಶಿವಾಜಿ ಜಯಂತಿ ಕಾರ್ಯಕ್ರಮಕ್ಕೆ ಶಾಸಕರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು ಎಂದು ಅವರು ತಿಳಿಸಿದ್ದಾರೆ.
Basanagouda Patil Yatnal
ಬಸನಗೌಡ ಪಾಟೀಲ್ ಯತ್ನಾಳ್
Updated on

ಯಾದಗಿರಿ: ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆ ಸಂದರ್ಭದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಫೆಬ್ರುವರಿ 21 ರಂದು ಶಿವಾಜಿ ಜಯಂತಿ ಕಾರ್ಯಕ್ರಮಕ್ಕೆ ಶಾಸಕರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು ಎಂದು ಅವರು ತಿಳಿಸಿದ್ದಾರೆ.

ಎಫ್‌ಐಆರ್ ಪ್ರಕಾರ, ಯತ್ನಾಳ್ ತಮ್ಮ ಭಾಷಣದ ಸಮಯದಲ್ಲಿ ಹಲವಾರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಅವರು ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಹಿಂದಿ ಕವಿತೆ ಉಲ್ಲೇಖಿಸಿ ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಬಗ್ಗೆ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು 'ಲವ್ ಜಿಹಾದ್' ಬಗ್ಗೆಯೂ ಅವರು ಉಲ್ಲೇಖಿಸಿದ್ದಾರೆ ಮತ್ತು ಕೆಲವು ಐತಿಹಾಸಿಕ ವ್ಯಕ್ತಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಭಾಷಣವು ವ್ಯಾಪಕ ವಿರೋಧಕ್ಕೆ ಕಾರಣವಾಗಿದ್ದು, ಯತ್ನಾಳ್ ಅವರು ಕೋಮು ಸೌಹಾರ್ದತೆಯನ್ನು ಕೆರಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ.

Basanagouda Patil Yatnal
'ಮದರಸಾ ನಿಷೇಧ, ಮೌಲಾನಗಳು ಜೈಲಿಗೆ.. ಮುಸ್ಲಿಮರ ಸಮಗ್ರ ನಾಗರಿಕ ನೋಂದಣಿ': ಕೇಂದ್ರ ಸರ್ಕಾರಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಸಲಹೆ

ಭಾಷಣದ ವಿಡಿಯೋ ರೆಕಾರ್ಡಿಂಗ್ ಮತ್ತು ಅದರ ಪ್ರತಿಲಿಪಿಯನ್ನು ಸಿದ್ಧಪಡಿಸುವುದು ಸೇರಿದಂತೆ ಪ್ರಾಥಮಿಕ ವಿಚಾರಣೆಯ ನಂತರ, ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾನೂನು ಅಭಿಪ್ರಾಯವನ್ನು ಪಡೆಯಲಾಯಿತು.

ಈ ಅಭಿಪ್ರಾಯದ ಆಧಾರದ ಮೇಲೆ, ಫೆಬ್ರುವರಿ 23 ರಂದು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 196 (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು ಮತ್ತು ಸಾಮರಸ್ಯ ಕದಡಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು), 299 (ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು), 302 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶಪೂರ್ವಕ ಉದ್ದೇಶದಿಂದ ಪದಗಳನ್ನು ಉಚ್ಚರಿಸುವುದು, ಇತ್ಯಾದಿ), 352 (ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು 353 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶಾಸಕರ ವಿರುದ್ಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com