ಬೀದಿಗಿಳಿದು ಪ್ರತಿಭಟನೆ ಮಾಡಿದ್ದಕ್ಕೆ ಸಿಕ್ತು ಬೆಲೆ: ರಾಜ್ಯದಲ್ಲಿ 60 ಸಾವಿರ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದು!

ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದು, ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸದಿರುವುದಕ್ಕೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು.
Siddaramaiah
ಸಿದ್ದರಾಮಯ್ಯ
Updated on

ಬೆಂಗಳೂರು: ಸರ್ಕಾರಿ ಹುದ್ದೆಗಳ ನೇಮಕಾತಿಗೆ ಒತ್ತಡ ಮತ್ತು ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಸುಮಾರು 60,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಯಾವ ಯಾವ ಇಲಾಖೆಗಳಲ್ಲಿ ಎಷ್ಟು ಹುದ್ದೆಗಳೆಂದು ಸಂಖ್ಯೆ ಅಂತಿಮಗೊಳಿಸಲು ವಿವಿಧ ಇಲಾಖೆಗಳೊಂದಿಗೆ ಚರ್ಚೆಗಳು ನಡೆಯುತ್ತಿವೆ.

ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದು, ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸದಿರುವುದಕ್ಕೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಈ ಬೆಳವಣಿಗೆ ನಂತರ ಹಣಕಾಸು ಇಲಾಖೆಯ ಮೂಲಗಳ ಪ್ರಕಾರ, ಭಾರಿ ಪ್ರಮಾಣದ ನೇಮಕಾತಿಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲು ನಾವು ಸಮ್ಮತಿ ನೀಡಿದ್ದೇವೆ. ಅಂತಿಮ ಸಂಖ್ಯೆಯನ್ನು ನಿಗದಿಪಡಿಸಲು ಇಲಾಖೆಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

Siddaramaiah
Watch | ಸರ್ಕಾರಿ ಉದ್ಯೋಗ ಭರ್ತಿ ಆಗ್ತಿಲ್ಲ! ಅದಕ್ಕೆ 3 ಸಾವಿರ ಕೊಡ್ತೀರೋದು!

ರಾಜ್ಯ ಸರ್ಕಾರವು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಆಸನಗಳು ಮತ್ತು ರಾಜ್ಯ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳ) ಕಾಯ್ದೆ, 2022 ಅಡಿಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ತಡೆಹಿಡಿದಿತ್ತು.

ವಿಚಾರಣೆ ಪೂರ್ಣಗೊಳ್ಳುವವರೆಗೆ ಹೆಚ್ಚಿದ ಮೀಸಲಾತಿಯ ಆಧಾರದ ಮೇಲೆ ಯಾವುದೇ ಹೊಸ ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಬಾರದು. ಈಗಾಗಲೇ ಪ್ರಾರಂಭವಾದ ನೇಮಕಾತಿ ಪ್ರಕ್ರಿಯೆಗಳು ಮುಂದುವರಿಯಬಹುದು. ನೇಮಕಾತಿಗಳು ಅಂತಿಮ ತೀರ್ಪಿಗೆ ಒಳಪಟ್ಟಿರಬೇಕು ಎಂದು ಹೈಕೋರ್ಟ್ ಹೇಳಿತ್ತು.

Siddaramaiah
2.7 ಲಕ್ಷ ಖಾಲಿ ಹುದ್ದೆಗಳನ್ನುಶೀಘ್ರವೇ ಭರ್ತಿ ಮಾಡಿ: ಧಾರವಾಡದಲ್ಲಿ ಬೀದಿಗಿಳಿದು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ; Video

ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ರಾಜ್ಯ ಸರ್ಕಾರವು 56,000–58,000 ಹುದ್ದೆಗಳನ್ನು ಭರ್ತಿ ಮಾಡಲು ಉತ್ಸುಕವಾಗಿದೆ ಎಂದು ತಿಳಿಸಿದ್ದಾರೆ. ಮಾರ್ಚ್ 3ರಂದು ಹೈಕೋರ್ಟ್ ನಲ್ಲಿ ವಿಚಾರಣೆ ಇದೆ. ಒಪ್ಪಿಗೆ ಸಿಕ್ಕ ಬಳಿಕ ಹುದ್ದೆಗಳ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದರು.

ಮಾರ್ಚ್ 6ರಂದು ಬಜೆಟ್ ಮಂಡಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಭಾಷಣದಲ್ಲಿ ಈ ಕುರಿತು ಘೋಷಣೆ ಮಾಡುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ 70 ಕ್ಕೂ ಹೆಚ್ಚು ಸರ್ಕಾರಿ ಇಲಾಖೆಗಳಲ್ಲಿನ ಮಂಜೂರಾದ ಹುದ್ದೆಗಳು 7.5 ಲಕ್ಷಕ್ಕಿಂತ ಹೆಚ್ಚು ಇದ್ದು, ಪ್ರಸ್ತುತ 2.84 ಲಕ್ಷ ಹುದ್ದೆಗಳು ಖಾಲಿ ಇವೆ. ಸರಾಸರಿ ಪ್ರತಿವರ್ಷ ಸುಮಾರು 25,000 ಹುದ್ದೆಗಳು ಖಾಲಿಯಾಗುತ್ತವೆ. ಕೋವಿಡ್ ಮಹಾಮಾರಿ, ಹಣಕಾಸು ಪರಿಣಾಮಗಳು, ಕಾನೂನು ಅಡಚಣೆಗಳು ಸೇರಿದಂತೆ ವಿವಿಧ ಕಾರಣಗಳಿಂದ ಅನೇಕ ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ಕೈಗೊಂಡಿರಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com