ರಾಜ್ಯದಲ್ಲಿ ಕುಡಿಯುವ ನೀರೂ ಕಲುಷಿತ: 2.46 ಲಕ್ಷ ನೀರಿನ ಮಾದರಿಯಲ್ಲಿ ರಾಸಾಯನಿಕ, ಬ್ಯಾಕ್ಟೀರಿಯಾ ಪತ್ತೆ..!

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೀರಿನ ಸ್ಯಾಂಪಲ್‌ನ್ನು ಸಂಗ್ರಹ ಮಾಡಿದ್ದು, ಜಲಜೀವನ್‌ ಮಿಷನ್‌ ಅಡಿಯಲ್ಲಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪರೀಕ್ಷೆಯಲ್ಲಿ ನೀರಿನಲ್ಲಿ ರಾಸಾಯನಿಕ ಹಾಗೂ ಬ್ಯಾಕ್ಟೀರಿಯಾಗಳು ಪತ್ತೆಯಾಗಿವೆ.
Water
ಕುಡಿಯುವ ನೀರುonline desk
Updated on

ಬೆಂಗಳೂರು: ತರಕಾರಿ, ಹಣ್ಣು ಸೇರಿದಂತೆ ಹಲವು ಆಹಾರ ಪದಾರ್ಥಗಳಿಗೆ ರಾಸಾಯನಿಕ ವಸ್ತುಗಳ ಬಳಕೆ ಜನರನ್ನು ಚಿಂತೆಗೀಡು ಮಾಡಿರುವ ನಡುವ್ಲೇಲ ಇದೀಗ ಮತ್ತೊಂದು ಆಘಾತಕಾರಿ ವಿಷಯ ಹೊರಬಿದ್ದಿದೆ.

ರಾಜ್ಯದಲ್ಲಿ ಕೇವಲ ತರಕಾರಿ ಅಷ್ಟೇ ಅಲ್ಲ, ಕುಡಿಯುವ ನೀರಿನಲ್ಲಿಯೂ ಕೆಮಿಕಲ್ಸ್‌ ಹಾಗೂ ಬ್ಯಾಕ್ಟೀರಿಯಾಗಳು ಪತ್ತೆಯಾಗಿವೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೀರಿನ ಸ್ಯಾಂಪಲ್‌ನ್ನು ಸಂಗ್ರಹ ಮಾಡಿದ್ದು, ಜಲಜೀವನ್‌ ಮಿಷನ್‌ ಅಡಿಯಲ್ಲಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪರೀಕ್ಷೆಯಲ್ಲಿ ನೀರಿನಲ್ಲಿ ರಾಸಾಯನಿಕ ಹಾಗೂ ಬ್ಯಾಕ್ಟೀರಿಯಾಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆ ಈ ವರ್ಷದಲ್ಲಿ ಇದುವರೆಗೆ 2.46 ಲಕ್ಷ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸಿದ್ದು, ಈ ಪೈಕಿ 10,911 ಮಾದರಿಗಳಲ್ಲಿ ರಾಸಾಯನಿಕ ಅಂಶಗಳಿರುವುದು ದೃಢಪಟ್ಟಿದೆ.

Water
ಕಲುಷಿತ ನೀರು: ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ ಜಲಮಾಲಿನ್ಯ ಗಮನಾರ್ಹ ಇಳಿಕೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆಯವರು ಮಾತನಾಡಿ,ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ನೀರು ಸರಬರಾಜು ಮಾಡಲು ಕಾಲ-ಕಾಲಕ್ಕೆ ಇಲಾಖೆಯಿಂದ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲು ಕ್ರಮ ವಹಿಸಿರುವುದರಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರಿನಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿರುವಂತಹ ಪ್ರಕರಣಗಳು ಕಂಡುಬಂದಿಲ್ಲ ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಮೂಲಗಳನ್ನು ನಿಗದಿಪಡಿಸಲಾಗಿರುವ ಮಾರ್ಗಸೂಚಿಗಳ ಅನುಗುಣವಾಗಿ ಬಿಐಎಸ್: 10500-2012 ಗುಣಮಟ್ಟದಂತೆ ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ, ರಾಜ್ಯದಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಮಟ್ಟದ ಪ್ರಯೋಗಾಲಯಗಳು ಮತ್ತು 47 ತಾಲ್ಲೂಕು ಮಟ್ಟದ ಪ್ರಯೋಗಾಲಯಗಳು ಕಾರ್ಯನಿರ್ವಹಿಸುತ್ತಿವೆ. ಈ ಪ್ರಯೋಗಾಲಯಗಳಲ್ಲಿ 2023-24ರಿಂದ ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

2023-24 ರಲ್ಲಿ ಸಂಗ್ರಹಿಸಲಾದ 2.98 ಲಕ್ಷ ಮಾದರಿಗಳಲ್ಲಿ, ಸುಮಾರು 25,000 ಮಾದರಿಗಳಲ್ಲಿ ರಾಸಾಯನಿಕಗಳು ಪತ್ತೆಯಾಗಿವೆ. 2024-25 ರಲ್ಲಿ, 3.9 ಲಕ್ಷ ಮಾದರಿಗಳಲ್ಲಿ 17,261 ರಾಸಾಯನಿಕಗಳನ್ನು ಪರೀಕ್ಷಿಸಲಾಗಿದೆ. ಈ ವರ್ಷ, ಇಲ್ಲಿಯವರೆಗೆ 2.46 ಲಕ್ಷ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, 10,911 ಮಾದರಿಗಳಲ್ಲಿ ರಾಸಾಯನಿಕಗಳು ಇರುವುದು ದೃಢಪಟ್ಟಿದೆ. ಸುರಕ್ಷಿತ ಕುಡಿಯುವ ನೀರಿಗಾಗಿ ಇಲಾಖೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com