ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು ಆದೇಶಕ್ಕೆ ಸುಪ್ರೀಂ ತಡೆ!

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (ಭಾಗ್ಯನಗರ) ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ನ ಎಸ್.ಎನ್. ಸುಬ್ಬಾರೆಡ್ಡಿ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.
Subbareddy
ಸುಬ್ಬಾರೆಡ್ಡಿ
Updated on

ನವದೆಹಲಿ: ಬಾಗೇಪಲ್ಲಿಯ ಎನ್.ಎಸ್ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ.

ಎದುರಾಳಿ, ಚುನಾವಣಾ ಆಯೋಗ ಮತ್ತು ಸಂಬಂಧಪಟ್ಟ ವ್ಯಕ್ತಿಗಳಿಗೆ ಅಫಿಡವಿಟ್, ಕೌಂಟರ್ ಅಫಿಡವಿಟ್ ಸಲ್ಲಿಸಲು ಸುಪ್ರೀಂ ಕೋರ್ಟ್ 6 ವಾರಗಳ ಕಾಲಾವಕಾಶ ನೀಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (ಭಾಗ್ಯನಗರ) ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ನ ಎಸ್.ಎನ್. ಸುಬ್ಬಾರೆಡ್ಡಿ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಸುಬ್ಬಾ ರೆಡ್ಡಿ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಹಾಗೂ ನ್ಯಾಯಮೂರ್ತಿ ಜಾಯ್‌ಮಲ್ಯ ಬಾಗ್ಚಿ ಪೀಠವು ನಡೆಸಿತು. ನಾಮಪತ್ರ ಸಲ್ಲಿಕೆ ವೇಳೆ ಸಂಪೂರ್ಣ ಆಸ್ತಿ ಘೋಷಣೆ ಮಾಡಿಲ್ಲ, ಕ್ರಿಮಿನಲ್ ಕೇಸ್‌ಗಳ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಅವರು 2023 ಜೂನ್ 24ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಆಸ್ತಿ ಮಾಹಿತಿಯನ್ನು ಉಲ್ಲಂಘನೆ ಮಾಡಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ ಸುಬ್ಬಾರೆಡ್ಡಿ ಶಾಸಕ ಸ್ಥಾನವನ್ನು ಹೈಕೋರ್ಟ್‌ ಅಸಿಂಧುಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಬ್ಬಾರೆಡ್ಡಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

Subbareddy
ಕಾಂಗ್ರೆಸ್ ಗೆ ಬಿಗ್ ಶಾಕ್: ಬಾಗೆಪಲ್ಲಿ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು- ಹೈಕೋರ್ಟ್ ಆದೇಶ

ಇಂದು ವಿಚಾರಣೆ ನಡೆಸಿದ ಸಿಜೆಐ ಸೂರ್ಯಕಾಂತ್ ನೇತೃತ್ವದ ಪೀಠವು ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ತಡೆ ನೀಡಿ, ಸೆಪ್ಟೆಂಬರ್ 7ಕ್ಕೆ ವಿಚಾರಣೆ ಮುಂದೂಡಿದೆ. ಇದೇ ವೇಳೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದ ಹಿನ್ನೆಲೆ ಮುಂದಿನ ವಿಚಾರಣೆವರೆಗೂ ಎಸ್‌.ಎನ್‌ ಸುಬ್ಬಾರೆಡ್ಡಿ ಅವರು ಬಾಗೇಪಲ್ಲಿ ಶಾಸಕರಾಗಿ ಮುಂದುವರಿಯಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com