ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬಿಗ್ ರಿಲೀಫ್: ಶಾಸಕ ವಿನಯ್‌ ಕುಲಕರ್ಣಿಗೆ 'ಸುಪ್ರೀಂ' ಜಾಮೀನು!

ಇತ್ತೀಚಿಗೆ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾ ಆಗಿತ್ತು. ಬಳಿಕ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕುಲಕರ್ಣಿ ಪರ ವಾದ ಮಂಡಿಸಿದ್ದ ವಕೀಲ ಶರಣಗೌಡ ಪಾಟೀಲ್ ಅವರ ತಂಡ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದೆ.
Vinay Kulkarni
ವಿನಯ್ ಕುಲಕರ್ಣಿ
Updated on

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುವಾಸದಲ್ಲಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ಸದ್ಯ ಕುಲಕರ್ಣಿಗೆ ರಿಲೀಫ್ ಸಿಕ್ಕಿದೆ.

ಇತ್ತೀಚಿಗೆ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾ ಆಗಿತ್ತು. ಬಳಿಕ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕುಲಕರ್ಣಿ ಪರ ವಾದ ಮಂಡಿಸಿದ್ದ ವಕೀಲ ಶರಣಗೌಡ ಪಾಟೀಲ್ ಅವರ ತಂಡ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದೆ.

ಸುಪ್ರೀಂ ಕೋರ್ಟ್​ನ ನ್ಯಾ. ಸಂಜಯ್ ಕರೋಲ ಅವರ ಪೀಠದಿಂದ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಮಂಜೂರಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ಗೆ ವಿನಯ್ ಕುಲಕರ್ಣಿ ಶರಣಾಗಿದ್ದರು. ಸಾಕ್ಷಿಗಳಿಗೆ ಬೆದರಿಕೆ ಆರೋಪದ ಮೇಲೆ ಜಾಮೀನು ರದ್ದಾಗಿತ್ತು.

ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದಡಿ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದು ಮಾಡುವಂತೆ ಸಿಬಿಐ ಮನವಿ ಮಾಡಿತ್ತು.

Vinay Kulkarni
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್; ಜಾಮೀನು ಮಂಜೂರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com