

ಕೊಪ್ಪಳ ಶಾಸಕ ಗಾಲಿ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ವಿಚಾರಕ್ಕೆ ಗಲಾಟೆ ನಡೆದು ಕಲ್ಲು ತೂರಾಟ, ಏರ್ ಫೈರ್ ನಡೆದಿದೆ. ಘಟನೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದಾನೆ.
ಜನವರಿ 3 ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿಯ ಹವಂಬಾವಿ ನಗರದಲ್ಲಿರುವ ಜನಾರ್ದನ ರೆಡ್ಡಿ ಮನೆ ಮುಂಭಾಗ ಬ್ಯಾನರ್ ಅಳವಡಿಕೆ ಮಾಡಲು ಒಂದು ಗುಂಪು ಮುಂದಾಗಿತ್ತು.
ಈ ವೇಳೆ ಬ್ಯಾನರ್ ಹಾಕದಂತೆ ರೆಡ್ಡಿ ಅಪ್ತರು ಅಡ್ಡಿ ಪಡಿಸಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದು ಪರಸ್ಪರ ಕಲ್ಲು ತೂರಿದ್ದಾರೆ. ಈ ವೇಳೆ ಗನ್ ಮ್ಯಾನ್ ಗಳು ಫೈರಿಂಗ್ ಮಾಡಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಈ ಬೆನ್ನಲ್ಲೇ ಬೆನ್ನಲ್ಲೇ ಸ್ಥಳಕ್ಕೆ ಮಾಜಿ ಸಚಿವ ಶ್ರೀರಾಮುಲು ಆಗಮಿಸಿದ್ದಾರೆ. ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಕೂಡಾ ಘಟನಾ ಸ್ಥಳಕ್ಕೆ ಬಂದಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಾಠಿ ಪ್ರಹಾರ ಮಾಡಿ ಪರಿಸ್ಥಿತಿ ನಿಯಂತ್ರಣ ಮಾಡಿದ್ದಾರೆ. ಜನಾರ್ದನ ರೆಡ್ಡಿ ಮನೆ ಮುಂದೆ ಬಿಜೆಪಿ ಕಾರ್ಯಕರ್ತರು, ಮುಖಂಡರು, ಜಮಾಯಿಸಿದ್ದಾರೆ.
ನಾನು ಕಾರಿನಿಂದ ಇಳಿದ ಮೇಲೆ ಫೈರಿಂಗ್
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜನಾರ್ದನ ರೆಡ್ಡಿ, ನಾನು ಕಾರಿನಿಂದ ಇಳಿದ ಮೇಲೆ ಫೈರಿಂಗ್ ನಡೆದಿದೆ. ನನ್ನನ್ನು ಟಾರ್ಗೆಟ್ ಮಾಡಿ ಗನ್ ಮ್ಯಾನ್ ಗಳು ಫೈರಿಂಗ್ ನಡೆಸಿದ್ದಾರೆ ಎಂದು ಫೈರ್ ಮಾಡಿದ ಬುಲೆಟ್ ನ್ನು ತೋರಿಸಿದ್ದಾರೆ. ವಾಲ್ಮೀಕಿ ಪುತ್ಥಳಿ ಅನಾವರಣ ಹೆಸರಿನಲ್ಲಿ ಬೆಂಕಿ ಹಚ್ಚಲಾಗುತ್ತಿದೆ. ಕೊಲೆಗಡುಕರನ್ನು ಹಿಂದಿಟ್ಟುಕೊಂಡು ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ.
Advertisement