Dr Vinay Hegde
ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್.ವಿನಯ ಹೆಗ್ಡೆ

ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹ ಅಧ್ಯಕ್ಷ, ಶೈಕ್ಷಣಿಕ ತಜ್ಞ ಎನ್ ವಿನಯ್ ಹೆಗ್ಡೆ ನಿಧನ

ರಾಜ್ಯದ ಪ್ರಮುಖ ಶಿಕ್ಷಣ ತಜ್ಞರು, ಉದ್ಯಮಿ ಮತ್ತು ಸಮಾಜ ಸೇವಕರಾಗಿ ಅವರು ಗುರುತಿಸಿಕೊಂಡಿದ್ದಾರೆ. ವಿನಯ ಹೆಗ್ಡೆ ಅವರು ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರ.
Published on

ಮಂಗಳೂರು: ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್.ವಿನಯ ಹೆಗ್ಡೆ ಇಂದು ಗುರುವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

ರಾಜ್ಯದ ಪ್ರಮುಖ ಶಿಕ್ಷಣ ತಜ್ಞರು, ಉದ್ಯಮಿ ಮತ್ತು ಸಮಾಜ ಸೇವಕರಾಗಿ ಅವರು ಗುರುತಿಸಿಕೊಂಡಿದ್ದಾರೆ. ವಿನಯ ಹೆಗ್ಡೆ ಅವರು ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರ.

ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ತಮ್ಮ ಶಿಕ್ಷಣ ಪೂರೈಸಿದವರು. 1979ರಲ್ಲಿ 'ನಿಟ್ಟೆ ಎಜುಕೇಶನ್ ಟ್ರಸ್ಟ್' ಸ್ಥಾಪಿಸಿದರು. ಇಂದು ನಿಟ್ಟೆ ಶಿಕ್ಷಣ ಸಂಸ್ಥೆಗಳು ಮಂಗಳೂರು, ಬೆಂಗಳೂರು ಮತ್ತು ನಿಟ್ಟೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳನ್ನು ಹೊಂದಿವೆ. ಇದರಲ್ಲಿ ವೈದ್ಯಕೀಯ, ಎಂಜಿನಿಯರಿಂಗ್, ದಂತವೈದ್ಯಕೀಯ, ಫಾರ್ಮಸಿ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜುಗಳು ಸೇರಿವೆ.

Dr Vinay Hegde
ಸರ್ಕಾರಿ  ಸವಲತ್ತುಗಳಿಗಾಗಿ ಕಿತ್ತಾಡುವ ವ್ಯವಸ್ಥೆಯಲ್ಲಿ ಬಂಜಾರ ಸಮುದಾಯ ಮಾದರಿ: ನ್ಯಾ. ಎನ್. ಸಂತೋಷ್ ಹೆಗ್ಡೆ 

ಪ್ರಸ್ತುತ ಅವರು ಮಂಗಳೂರಿನ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದರು. ಲೆಮಿನಾ ಸಸ್ಪೆನ್ಷನ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಲೆಮಿನಾ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಇದು ಆಟೋಮೊಬೈಲ್ ಬಿಡಿಭಾಗಗಳ ತಯಾರಿಕೆಯಲ್ಲಿ ಪ್ರಮುಖ ಸಂಸ್ಥೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com