2026 ಗಣರಾಜ್ಯೋತ್ಸವ ಪ್ರಯುಕ್ತ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಈ ಬಾರಿ ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕರಾದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ರವರ ಜೀವನ ಚಿತ್ರ ಬಿಂಬಿಸುವ 219ನೇ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗುತ್ತಿದೆ.
 Lalbagh
ಲಾಲ್ ಬಾಗ್
Updated on

ಬೆಂಗಳೂರು: 2026 ಗಣರಾಜ್ಯೋತ್ಸವ ಪ್ರಯುಕ್ತ ತೋಟಗಾರಿಕೆ ಇಲಾಖೆಯಿಂದ ಲಾಲ್ ಬಾಗ್ ನಲ್ಲಿ ಫಲಪುಷ್ಪ' ಪ್ರದರ್ಶನವನ್ನು ಆಯೋಜಿಸಲಾಗುತ್ತಿದ್ದು, ವಿವಿಧ ಸ್ಪರ್ಧೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಬಾರಿ ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕರಾದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ರವರ ಜೀವನ ಚಿತ್ರ ಬಿಂಬಿಸುವ 219ನೇ ಫಲಪುಷ್ಪ ಪ್ರದರ್ಶನವನ್ನು ಇದೇ ಜನವರಿ 15 ರಿಂದ 26 ರವರೆಗೆ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಆಯೋಜಿಸಲಾಗುತ್ತಿದೆ.

ಪ್ರದರ್ಶನದ ಪ್ರಯುಕ್ತ ವಿವಿಧ ಉದ್ಯಾನವನಗಳು, ತೋಟಗಳು, ತಾರಸಿ, ಕೈತೋಟಗಳು, ತರಕಾರಿ, ಔಷಧಿ ಗಿಡಗಳು, ಕುಂಡಗಳಲ್ಲಿ ಬೆಳೆದ ವಿವಿಧ ಜಾತಿಯ ಗಿಡಗಳು, ಇಕೆಬಾನ, ಜಾನೂರ್, ಥಾಯ್ ಆರ್ಟ್ ಮತ್ತು ಪೂರಕ ಕಲೆಗಳಿಗೆ ಸಂಬಂಧಿಸಿದಂತೆ ಸ್ಪರ್ಧೆಗಳನ್ನು 2026 ರ ಜನವರಿ 17 ರಂದು ಹಮ್ಮಿಕೊಳ್ಳಲಾಗಿದೆ.

 Lalbagh
ಬೆಂಗಳೂರಿಗೆ ಲಾಲ್ ಬಾಗ್, ಕಬ್ಬನ್‌ ನಂತಹ ಮತ್ತಷ್ಟು ಪಾರ್ಕ್ ಗಳ ಅಗತ್ಯವಿದೆ: ಸಚಿವ ಈಶ್ವರ್ ಖಂಡ್ರೆ

ಇಕೆಬಾನ, ಜಾನೂರ್, ಥಾಯ್ ಆರ್ಟ್ ಮತ್ತು ಇತರೆ ಪೂರಕ ಕಲೆಗಳಿಗೆ ಸಂಬಂಧಿಸಿದಂತೆ ಆಸಕ್ತರು, ಪ್ರದರ್ಶಕರಿಂದ 2026 ಜನವರಿ 5 ರಿಂದ 12 ರವರೆಗೆ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಲಾಲ್ ಬಾಗ್ ನ ತೋಟಗಾರಿಕಾ ಅಪರ ನಿರ್ದೇಶಕರ ಕಚೇರಿಯಲ್ಲಿ ಕಚೇರಿಯಲ್ಲಿ ಅರ್ಜಿಗಳನ್ನು ಬೆಳಿಗ್ಗೆ 10 ರಿಂದ 5 ಗಂಟೆಯವರೆಗೆ ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ತಾರಕೇಶ್ವರಿ ಕೆ.ಆರ್ 8497048733 ಹಾಗೂ ಪುಷ್ಪಲತಾ ಎಂ. ಅವರನ್ನು 8904592122 ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com