

ಬೆಂಗಳೂರು: ನಟ ದರ್ಶನ್ ತೂಗುದೀಪ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಶ್ಲೀಲ ಮತ್ತು ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಸಾಫ್ಟ್‌ವೇರ್ ಎಂಜಿನಿಯರ್ ಮತ್ತು ಆಟೋರಿಕ್ಷಾ ಚಾಲಕನನ್ನು ಬಂಧಿಸಿದ್ದಾರೆ.
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸದ್ಯ ಜೈಲಿನಲ್ಲಿದ್ದಾರೆ. ಬೆಂಗಳೂರಿನ ಚಿಕ್ಕಬಾಣಾವರ ನಿವಾಸಿ ಆಟೋರಿಕ್ಷಾ ಚಾಲಕ ಚಂದ್ರಶೇಖರ್ ಬಿ (45) ಮತ್ತು ದಾವಣಗೆರೆಯ ಸಾಫ್ಟ್‌ವೇರ್ ಎಂಜಿನಿಯರ್ ನಿತಿನ್ (31) ಬಂಧಿತ ಆರೋಪಿಗಳು
ಡಿಸೆಂಬರ್ 24 ರಂದು ವಿಜಯಲಕ್ಷ್ಮಿ ಅವರು ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ವ್ಯಕ್ತಿಗಳು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಮತ್ತು ಅವರ ಕುಟುಂಬದ ವಿರುದ್ಧ ಕೀಳು ಮಟ್ಟದ ಅಶ್ಲೀಲ, ಅವಹೇಳನಕಾರಿ ಪೋಸ್ಟ್‌ಗಳು, ಕಾಮೆಂಟ್‌ಗಳು ಮತ್ತು ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದಾರೆ ಎಂದು ವಿಜಯಲಕ್ಷ್ಮಿ ದೂರು ನೀಡಿದ್ದರು.
ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ತನಿಖೆಯ ಸಮಯದಲ್ಲಿ, ಆರೋಪಿಗಳು ವಿಜಯಲಕ್ಷ್ಮಿ ಮತ್ತು ಅವರ ಕುಟುಂಬದ ವಿರುದ್ಧ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡಿರುವುದು ತಿಳಿದು ಬಂದಿದೆ. ತನಿಖೆ ಮುಂದುವರಿದಿದ್ದು ಉಳಿದ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ" ಎಂದು ನಗರ ಪೊಲೀಸರು ತಿಳಿಸಿದ್ದಾರೆ.
Advertisement