

ಕಾರವಾರ: ಒಂದು ಮದುವೆಯಾಗಿ ಅನುಭವಿಸಿದ್ದೇನೆ. ಮತ್ತೊಂದು ಮದುವೆಯಾಗಲು ಇಷ್ಟವಿಲ್ಲ ಎಂದು ಹೇಳಿದ್ದ ವಿವಾಹಿತೆ ರಂಜಿತಾಳನ್ನು ಪ್ರಿಯಕರ ರಫೀಕ್ ಚೂರಿ ಇರಿದು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಮೃತಳನ್ನು ಯಲ್ಲಾಪುರ ಪಟ್ಟಣದ ನಿವಾಸಿ ರಂಜಿತಾ ಎಂದು ಗುರುತಿಸಲಾಗಿದೆ. ಹತ್ತು ವರ್ಷಗಳ ಹಿಂದೆ ರಂಜಿತಾ ವಿಚ್ಛೇದನ ಪಡೆದು ತಂದೆ-ತಾಯಿ ಹಾಗೂ ಅಣ್ಣನೊಂದಿಗೆ ಯಲ್ಲಾಪುರದಲ್ಲಿ ಮಗುವಿನೊಂದಿಗೆ ವಾಸವಾಗಿದ್ದಳು. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ರಂಜಿತಾಳಿಗೆ ರಫೀಕ್ ನ ಪರಿಚಯವಾಗಿತ್ತು.
ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರ ಕುಟುಂಬಗಳ ನಡುವೆ ಸಹ ಒಳ್ಳೆಯ ಬಾಂಧವ್ಯ ಇತ್ತು. ರಫೀಕ್ ಆಗಾಗ ರಂಜಿತಾಳ ಮನೆಗೆ ಬಂದು ಹೋಗುತ್ತಿದ್ದನು. ಈ ಮಧ್ಯೆ ರಫೀಕ್ ಮದುವೆಯಾಗುವಂತೆ ರಂಜಿತಾಳನ್ನು ಒತ್ತಾಯಿಸುತ್ತಿದ್ದನು. ಅದಕ್ಕೆ ರಂಜಿತಾ ವಿರೋಧ ವ್ಯಕ್ತಪಡಿಸಿದ್ದಳು. ನಾನು ಈಗಾಗಲೇ ಮದುವೆಯಾಗಿ ಸಾಕಷ್ಟು ಅನುಭವಿಸಿದ್ದೇನೆ. ಮತ್ತೆ ಮದುವೆಯಾಗುವ ಇಷ್ಟವಿಲ್ಲ. ನಮ್ಮ ಸಂಬಂಧ ಹೀಗೆ ಇರಲಿ, ಮದುವೆ ಮಾತ್ರ ಬೇಡ ಎಂದು ಎಂದು ಹೇಳಿದ್ದಳು.
ರಂಜಿತಾಳ ಮಾತಿನಿಂದ ಕೋಪಗೊಂಡಿದ್ದ ರಫೀಕ್ ಎಂದು ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ರಂಜಿತಾಳನ್ನು ಅಡ್ಡಗಟ್ಟಿ ಮದುವೆಯಾಗುವಂತೆ ಒತ್ತಾಯಿಸಿದ್ದಾನೆ. ಈ ವೇಳೆ ರಂಜಿತಾ ಕೋಪದಿಂದ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ರಫೀಕ್ ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಪ್ರಕರಣ ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ರಫೀಕ್‌ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Advertisement