ಕೊಪ್ಪಳದಲ್ಲಿ ಹೈಡ್ರಾಮಾ: ಕೇಂದ್ರ ಸಚಿವ ಸೋಮಣ್ಣ ಅವರತ್ತ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು!

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಿಗಿ ಹಾಗೂ ಸಂಸದ ಕೆ. ರಾಜಶೇಖರ್ ಹಿಟ್ನಾಳ್ ಹೆಸರನ್ನು ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸೇರಿಸಿಲ್ಲ ಎಂದು ಆರೋಪಿಸಿ ಕಾಂಗ್ರೆಸ್​​ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Chair thrown at Union minister V Somanna in Koppal
ಸೋಮಣ್ಣರತ್ತ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು
Updated on

ಕೊಪ್ಪಳ: ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಸೋಮವಾರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಭಾರಿ ಹೈಡ್ರಾಮಾ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸಚಿವ ವಿ. ಸೋಮಣ್ಣ ಅವರತ್ತ ಕುರ್ಚಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಿಗಿ ಹಾಗೂ ಸಂಸದ ಕೆ. ರಾಜಶೇಖರ್ ಹಿಟ್ನಾಳ್ ಹೆಸರನ್ನು ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸೇರಿಸಿಲ್ಲ. ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಕೇಂದ್ರ ಸಚಿವ ಸೋಮಣ್ಣ ಎದುರೇ ಕಾಂಗ್ರೆಸ್​​ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಯಕ್ರಮದ ಪತ್ರಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಸಂಸದರ ಹೆಸರಿಲ್ಲದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸಚಿವರತ್ತ ಕುರ್ಚಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅಂಗರಕ್ಷಕರು ಸೋಮಣ್ಣರತ್ತ ಬರುತ್ತಿದ್ದ ಕುರ್ಚಿಗಳನ್ನ ತಡೆದಿದ್ದಾರೆ. ಇದರಿಂದ ಸಂಭವನೀಯ ಅನಾಹುತ ತಪ್ಪಿದೆ. ಅಲ್ಲದೆ ಸೋಮಣ್ಣ ಅವರ ಕಾರಿಗೂ ಮುತ್ತಿಗೆ ಹಾಕಿ ರೋಶಾವೇಷ ಪ್ರದರ್ಶಿಸಿದ್ದಾರೆ. ಇದರಿಂದ ತೀವ್ರ ಮುಜುಗರ ಅನುಭವಿಸಿದ ಸೋಮಣ್ಣ ಅವರು ಕೇವಲ 5 ನಿಮಿಷಗಳಕಾಲ ಸ್ಥಳದಲ್ಲಿದ್ದು, ಬಳಿಕ ತೆರಳಿದ್ದಾರೆ.

Chair thrown at Union minister V Somanna in Koppal
ಬಳ್ಳಾರಿ ಫೈರಿಂಗ್: CID ಬೇಡ, ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಲಿ- ಕೇಂದ್ರ ಸಚಿವ ವಿ. ಸೋಮಣ್ಣ ಒತ್ತಾಯ

ಇನ್ನು ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸೋಮಣ್ಣ, ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಆದರೂ ಕಾಂಗ್ರೆಸ್ ಕಾರ್ಯಕರ್ತರ ಮೂಲಕ ಗಲಾಟೆ ಮಾಡಿಸಿದ್ದಾರೆ. ಸುಮಾರು 27 ಕೋಟಿ. ರೂಪಾಯಿ ವೆಚ್ಚದ ಹಿಟ್ನಾಳ್, ಮುನಿರಾಬಾದ್, ಗಿಣಗೇರಾ ಮೇಲ್ಸೇತುವೆ ಕಾಮಗಾರಿ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಣದಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com