Video: ಚಿತ್ರಮಂದಿರದ ಮಹಿಳಾ ಟಾಯ್ಲೆಟ್ ನಲ್ಲಿ ಸೀಕ್ರೆಟ್ ಕ್ಯಾಮೆರಾ; ವಿಡಿಯೋ ಚಿತ್ರೀಕರಿಸುತ್ತಿದ್ದ ಕಿರಾತಕನಿಗೆ ಬಿತ್ತು ಗೂಸಾ! FIR ದಾಖಲು

ಮಡಿವಾಳ ಪೊಲೀಸ್‌ ಠಾಣೆಯಲ್ಲಿ ಥಿಯೇಟರ್ ಮತ್ತು ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪೊಲೀಸರು ವಿಡಿಯೋ ಮಾಡಿದ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.
Hidden Camera Found in Sandhya Theatre Women’s Toilet
ಸಂಧ್ಯಾ ಥಿಯೇಟರ್ ಬಾತ್ರೂಮ್ ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟ ಭೂಪ
Updated on

ಬೆಂಗಳೂರು: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಬೆಂಗಳೂರಿನ ಚಿತ್ರಮಂದಿರವೊಂದರ ಮಹಿಳಾ ಟಾಯ್ಲೆಟ್ ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಚಿತ್ರೀಕರಣ ನಡೆಸುತ್ತಿದ್ದ ಗಂಭೀರ ಆರೋಪ ಕೇಳಿಬಂದಿದೆ.

ಬೆಂಗಳೂರಿನ ಮಡಿವಾಳದಲ್ಲಿರುವ ಸಂಧ್ಯಾ ಥಿಯೇಟರ್ ನಲ್ಲಿ ಈ ಘಟನೆ ನಡೆದಿದ್ದು, ಸಂಧ್ಯಾ ಥಿಯೇಟರ್‌ ಬಾತ್‌ ರೂಮ್‌ನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಟೆಕ್ಕಿ ದೂರಿನ ಮೇರೆಗೆ ಇದೀಗ ಮಡಿವಾಳ ಪೊಲೀಸ್‌ ಠಾಣೆಯಲ್ಲಿ ಥಿಯೇಟರ್ ಮತ್ತು ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪೊಲೀಸರು ವಿಡಿಯೋ ಮಾಡಿದ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.

ಸಂಧ್ಯಾ ಥಿಯೇಟರ್‌ನ (Sandhya Theatre) ಬಾತ್‌ ರೂಮ್‌ನಲ್ಲಿ ಕ್ಯಾಮರಾ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಡಿವಾಳ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಹಿಳಾ ಟೆಕ್ಕಿ ದೂರಿನ ಮೇರೆಗೆ ಥಿಯೇಟರ್ ಹಾಗೂ ಸಿಬ್ಬಂದಿ ರಾಜೇಶ್, ಕಮಲ್​​ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಆರೋಪಿಗಳನ್ನ ವಶಕ್ಕೆ ಪಡೆದು ಮಡಿವಾಳ ಪೊಲೀಸರಿಂದ ವಿಚಾರಣೆ ನಡೆದಿದೆ.

ಮೂಲಗಳ ಪ್ರಕಾರ ಭಾನುವಾರ ಮಹಿಳಾ ಟೆಕ್ಕಿಯೊಬ್ಬರು ಸ್ನೇಹಿತರ ಜೊತೆ ಸಿನಿಮಾ ನೋಡಲು ಸಂಧ್ಯಾ ಥಿಯೇಟರ್​​ಗೆ ಹೋಗಿದ್ದರು. ಇಂಟರ್ವೆಲ್ ವೇಳೆ ವಾಶ್ ರೂಂಗೆ ಹೋದಾಗ ಮಹಿಳಾ ಟೆಕ್ಕಿ ಹಾಗೂ ಸ್ನೇಹಿತೆಯರ ಖಾಸಗಿ ವಿಡಿಯೋವನ್ನು ರಾಜೇಶ್ ಎಂಬಾತ ಚಿತ್ರೀಕರಣ ಮಾಡಿದ್ದಾನೆ.

ಮಹಿಳಾ ಟೆಕ್ಕಿ ಆರೋಪಿಯನ್ನ ಹಿಡಿದು ಮಾಲೀಕರ ಬಳಿ ಕರೆದೊಯ್ದಿದ್ದಾರೆ. ಈ ವೇಳೆ ಕಮಲ್ ಎಂಬಾತ ವಿಡಿಯೋ ಮಾಡಲು ಹೇಳಿದ್ದಾಗಿ ಹೇಳಿಕೆ ನೀಡಿದ್ದಾನೆ. ಸದ್ಯ ರಾಜೇಶ್, ಕಮಲ್ ಮತ್ತು ಸಂಧ್ಯಾ ಥಿಯೇಟರ್ ವಿರುದ್ಧ ಕೇಸ್ ದಾಖಲಾಗಿದೆ. ಇನ್ನು ಆತನ ಮೊಬೈಲ್‌ನಲ್ಲಿ ಹಲವು ಯುವತಿಯರ ಖಾಸಗಿ ವಿಡಿಯೋಗಳು ಪತ್ತೆಯಾಗಿದ್ದು, ಹಲವು ದಿನಗಳಿಂದ ಖಾಸಗಿ ವಿಡಿಯೋಗಳ ಚಿತ್ರೀಕರಣ ಮಾಡಿರುವ ಶಂಕೆ ವ್ಯಕ್ತವಾಗಿದೆ.

Hidden Camera Found in Sandhya Theatre Women’s Toilet
ಬೆಂಗಳೂರು: ಚಿತ್ರಮಂದಿರದ ಮಹಿಳಾ ಶೌಚಾಲಯದೊಳಗೆ ವಿಡಿಯೋ ರೆಕಾರ್ಡ್ ಮಾಡಿದ ಬಾಲಾಪರಾಧಿ ಬಂಧನ!

ದೂರು ದಾಖಲು

ದೂರುದಾರೆ ಮತ್ತು ಅವರ ಸ್ನೇಹಿತೆಯರು ಬೆಂಗಳೂರಿನ ಮಡಿವಾಳಾದ ವಿ.ಪಿ. ರಸ್ತೆಯಲಿರುವ ಸಂಧ್ಯಾ ಥಿಯೇಟರ್‌ಗೆ 'ನುವ್ವು ನಾಕು ನಚ್ಚಾವು' ಸಿನಿಮಾವನ್ನು ರಾತ್ರಿ 7 ರಿಂದ 10 ಗಂಟೆಯ ಸಮಯದಲ್ಲಿ ವೀಕ್ಷಿಸಲು ಹೋಗಿದ್ದು, ವಿರಾಮದ ಸಮಯದಲ್ಲಿ ಸುಮಾರು ರಾತ್ರಿ 8:30 ಗಂಟೆಗೆ, ದೂರುದಾರೆ ಮತ್ತು ಅವರ ಸ್ನೇಹಿತೆಯರು ಥಿಯೇಟರ್ ಆವರಣದಲ್ಲಿರುವ ಶೌಚಾಲಯಕ್ಕೆ ಹೋದರು.

ಆದರೆ ಅಲ್ಲಿ ಮಹಿಳಾ ಶೌಚಾಲಯದ ಮಧ್ಯದಲ್ಲಿ, ಒಬ್ಬ ವ್ಯಕ್ತಿ ಮೊಬೈಲ್ ಫೋನ್ ಬಳಸಿ ವಿಡಿಯೋ ತೆಗೆಯುತ್ತಿರುವುದನ್ನು ನೋಡಿ, ತಕ್ಷಣ ತಮ್ಮ ಗಂಡನಿಗೆ ಕರೆ ಮಾಡಿ, ಆ ವ್ಯಕ್ತಿಯನ್ನು ಹಿಡಿದುಕೊಂಡು, ಅವರ ಫೋನ್ ಅನ್ನು ಪರಿಶೀಲಿಸಿದಾಗ ಅದರಲ್ಲಿ ದೂರುದಾರೆ ಮತ್ತು ಅವರ ಸ್ನೇಹಿತೆಯರ ಖಾಸಗಿ ವಿಡಿಯೋಗಳು ಇರುವುದು ಕಂಡುಬಂದಿದೆ.

ತಿಂಗಳ ಹಿಂದಷ್ಟೇ ಕೆಲಸಕ್ಕೆ ಸೇರಿದ್ದ ನೌಕರ

ಇನ್ನು ಸಂಧ್ಯಾ ಥಿಯೇಟರ್‌ನ ಮ್ಯಾನೆಜ್​ಮೆಂಟ್​ನವರನ್ನು ವ್ಯಕ್ತಿಯ ಬಗ್ಗೆ ವಿಚಾರಿಸಿದಾಗ ಆತ ಸುಮಾರು ಒಂದು ತಿಂಗಳಿನಿಂದ ಅಲ್ಲಿ ಕೆಲಸ ಮಾಡುತ್ತಿದ್ದು, ಆತನ ಹೆಸರು ರಾಜೇಶ್ ಎಂದು ತಿಳಿಸಿದ್ದಾರೆ.

ನಂತರ ವಿಡಿಯೋಗಳನ್ನು ತೆಗೆಯಲು ಯಾರು ಸೂಚನೆ ನೀಡಿದರು ಎಂದು ದೂರುದಾರೆ ರಾಜೇಶ್​ನನ್ನು ಕೇಳಿದಾಗ, ಕಮಲ್ ಎಂಬ ವ್ಯಕ್ತಿಯ ಹೆಸರು ಹೇಳಿದ್ದು, ನಂತರ ದೂರುದಾರೆ 112 ಪೊಲೀಸ್ ಹೆಲ್‌ಪ್‌ಲೈನ್‌ಗೆ ಕರೆ ಮಾಡಿದ್ದು, ನಂತರ ಪೊಲೀಸರು ಬಂದು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ದೂರುದಾರೆಯ ಸುರಕ್ಷತೆಯ ಕಾರಣಕ್ಕಾಗಿ ರಾಜೇಶ್ ಬಳಸಿದ ರೆಡ್ಡಿ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆದು, ಜೊತೆಗೆ ರಾಜೇಶ್, ಕಮಲ್ ಮತ್ತು ಸಂಧ್ಯಾ ಥಿಯೇಟರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕಿರಾತಕನಿಗೆ ಸಾರ್ವಜನಿಕ ಗೂಸಾ

ಇನ್ನು ಥಿಯೇಟರ್ ನ ಟಾಯ್ಲೆಟ್ ನಲ್ಲಿ ವಿಡಿಯೋ ಚಿತ್ರೀಕರಿಸುತ್ತಿದ್ದ ಆರೋಪಿಗೆ ಮಹಿಳೆಯರು ಅಲ್ಲಿಯೇ ಗೂಸಾಕೊಟ್ಟಿದ್ದಾರೆ. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

3 ವರ್ಷಗಳ ಹಿಂದೆ ಉಡುಪಿಯ ಖ್ಯಾತ ಪ್ಯಾರಾ ಮೆಡಿಕಲ್ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಇದೇ ರೀತಿ ರಹಸ್ಯವಾಗಿ ಮೊಬೈಲ್ ಕ್ಯಾಮರಾ ಬಳಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಈ ವಿಚಾರ ರಾಜಕೀಯ ತಿರುವು ಪಡೆದುಕೊಂಡು ಸಂಚಲನ ಸೃಷ್ಟಿಸಿತ್ತು.

ಎಫ್ಐಆರ್ ದಾಖಲು

ಇನ್ನು ಬಾತ್ರೂಮ್ ನಲ್ಲಿ ಕ್ಯಾಮೆರಾ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಥಿಯೇಟರ್ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳ ವಿರುದ್ಧವೂ ಎಫ್ ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com