

ಬಳ್ಳಾರಿ: ಜನವರಿ 1 ರಂದು ಬಳ್ಳಾರಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪೂರ್ವ ಯೋಜಿತ ಪಿತೂರಿ ಎಂದು ಬಿಜೆಪಿ ಶಾಸಕ ಜಿ. ಜನಾರ್ದನ ರೆಡ್ಡಿ ಬುಧವಾರ ಆರೋಪಿಸಿದ್ದಾರೆ ಮತ್ತು ಈ ಘಟನೆಗೆ ಆಡಳಿತಾರೂಢ ಕಾಂಗ್ರೆಸ್ ಶಾಸಕ ನರ ಭರತ್ ರೆಡ್ಡಿಯೇ ಹೊಣೆ ಎಂದಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತ ಮತ್ತು ಭರತ್ ರೆಡ್ಡಿ ಬೆಂಬಲಿಗ ರಾಜಶೇಖರ್ ಅವರನ್ನು ಕಾಂಗ್ರೆಸ್ ನಾಯಕ ಸತೀಶ್ ರೆಡ್ಡಿ ಅವರ ಖಾಸಗಿ ಗನ್‌ಮ್ಯಾನ್ ಹಾರಿಸಿದ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ.
ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಬ್ಯಾನರ್ ಹಾಕುವ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿತು. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರ ಮನೆಯ ಬಳಿ ಬ್ಯಾನರ್ ಹಾಕಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಮೂವರು ಖಾಸಗಿ ಗನ್‌ಮ್ಯಾನ್, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ 26 ಜನರನ್ನು ಬಂಧಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಇಂದು ಸುದ್ದಿಗೋಷ್ಠಿ ನಡೆಸಿದ ಜನಾರ್ದನ ರೆಡ್ಡಿ, ಘಟನೆಯ ವಿಡಿಯೇ ಕ್ಲಿಪ್ ಅನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಕಾಂಗ್ರೆಸ್ ನಾಯಕರೊಬ್ಬರ ಖಾಸಗಿ ಗನ್‌ಮ್ಯಾನ್ ರಾಜಶೇಖರ್ ಮೇಲೆ ಗುಂಡು ಹಾರಿಸಿದ್ದು, ಅವರು ತಕ್ಷಣವೇ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.
ಹಿಂಸಾಚಾರದ ಸಮಯದಲ್ಲಿ ರಾಜಶೇಖರ್ ಅವರ ಮೇಲೆ ಗುಂಡು ಹಾರಿಸಿದ ನಿರ್ಣಾಯಕ ವಿಡಿಯೋ ಪುರಾವೆಯನ್ನು ಬಿಡುಗಡೆ ಮಾಡಿದ್ದೇನೆ. ಘಟನೆಯ ದೃಶ್ಯಗಳು, ಆಕಸ್ಮಿಕ ಗುಂಡು ಹಾರಿಸುವುದಕ್ಕಿಂತ ಉದ್ದೇಶಪೂರ್ವಕ ಕೃತ್ಯವನ್ನು ಎಸಗಿರುವುದು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಪ್ರತಿಪಾದಿಸಿದರು.
ಇದು ಒಂದು ಕ್ರೂರ ಕೊ, ಖಾಸಗಿ ಬಂದೂಕನ್ನು ಬಳಸಿ ಗುಂಡು ಹಾರಿಸಲಾಯಿತು ಮತ್ತು "ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಅವರ ಸ್ಪಷ್ಟ ಸೂಚನೆ ಮೇರೆಗೆ ಈ ಗುಂಡಿನ ದಾಳಿ ನಡೆಸಲಾಯಿತು" ಎಂದು ಮಾಜಿ ಸಚಿವರು ಆರೋಪಿಸಿದರು.
ರೆಡ್ಡಿ ಅವರ ಪ್ರಕಾರ, ರಾಜಶೇಖರ್ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾಗ ಅವರಿಗೆ ಪಾಯಿಂಟ್-ಬ್ಲಾಂಕ್ ರೇಂಜ್‌ನಿಂದ ಗುಂಡು ಹಾರಿಸಲಾಯಿತು. ಇದು ಉದ್ದೇಶಪೂರ್ವಕ ಕೊಲೆ. ಈ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದರು.
ಘಟನೆಗೆ ಶಾಸಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ, ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದ ಜನಾರ್ದನ ರೆಡ್ಡಿ, ಬಿಜೆಪಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ಹೋರಾಟ ಮುಂದುವರೆಸಲಿದೆ ಎಂದು ಹೇಳಿದರು.
ಈ ಬಗ್ಗೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
Advertisement