

ಕಾರವಾರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಕಾರು ಮತ್ತು ಕಾರಿನಲ್ಲಿದ್ದ ಇಬ್ಬರು ಗುರುತು ಸಿಗಲಾರದಷ್ಟು ಸುಟ್ಟು ಕರಕಲಾಗಿದ್ದಾರೆ.
ತಡರಾತ್ರಿ ಘಟನೆ ನಡೆದಿರುವ ಸಾಧ್ಯತೆ ಇದೆ. ಕಾರು ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿರುವಂತೆ ಕಂಡುಬಂದಿದೆ. ಕಾರಿನ ನಂಬರ್ ಪ್ಲೇಟ್ ಕೂಡಾ ಬೆಂಕಿಯಲ್ಲಿ ಸುಟ್ಟು ಕಾಣದಾಗಿದೆ. ಕಾರು ಮತ್ತು ಕಾರಿನಲ್ಲಿ ಇದ್ದವರ ಗುರುತು ಪತ್ತೆ ಕಾರ್ಯಾಚರಣೆಗೆ ಪೊಲೀಸರು ಇಳಿದಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳಿಂದ ಕಾರ್ಯಾಚರಣೆ ಮುಂದುವರೆದಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಹೊರಬರಲಾಗದೇ ಸಜೀವ ದಹನವಾಗಿದ್ದಾರೆ. ಬೆಂಕಿಯ ತೀವ್ರತೆಗೆ ಕಾರು ಹಾಗೂ ಮೃತರ ಗುರುತು ಪತ್ತೆಯಾಗದಷ್ಟು ಸುಟ್ಟು ಕರಕಲಾಗಿದೆ.
ಕಾರಿನ ನಂಬರ್ ಪ್ಲೇಟ್ ಸಹ ಸಂಪೂರ್ಣವಾಗಿ ಸುಟ್ಟು ಹೋಗಿರುವುದರಿಂದ, ವಾಹನದ ಮಾಲೀಕತ್ವ ಹಾಗೂ ಮೃತರ ಗುರುತು ಪತ್ತೆ ಮಾಡುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.
Advertisement