

ಬೆಂಗಳೂರು: ಯುರೋಪ್‌ನಲ್ಲಿ ಎಲೆಕ್ಟ್ರಾನಿಕ್ ಎಂಜಿನಿಯರಿಂಗ್‌ನಲ್ಲಿ ಶಿಕ್ಷಣ ಮುಗಿಸಿ ಇತ್ತೀಚೆಗೆ ಭಾರತಕ್ಕೆ ಮರಳಿದ್ದ 26 ವರ್ಷದ ಯುವಕ ಬೆಂಗಳೂರಿನ ಕಟ್ಟಡದ 16 ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ.
ನಿಕ್ಷಾಪ್ ಮೃತ ಎಂಜಿನೀಯರ್. ಎರಡು ದಿನಗಳಿಂದ ಹೆಸರಘಟ್ಟದ ಗೌಡಿಯ ಮಠದಲ್ಲಿ ವಾಸ್ತವ್ಯ ಹೂಡಿದ್ದರು. ಬುಧವಾರ ಬೆಂಗಳೂರಿನ ಶೆಟ್ಟಿಹಳ್ಳಿಯ ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ ಪೋಷಕರಾದ ಕಿಶೋರ್ ಮತ್ತು ಜಯಶ್ರೀ ಅವರ ಮನೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಾಗಲಗುಂಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವಿಗೆ ಕಾರಣ ತಿಳಿದುಕೊಳ್ಳಲು ತನಿಖೆ ನಡೆಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಲವು ವರ್ಷಗಳಿಂದ ತಮ್ಮ ಮಗ ಸ್ಕಿಜೋಫ್ರೇನಿಯಾದಿಂದ ಬಳಲುತ್ತಿದ್ದರು ಎಂದು ನಿಕ್ಷಾಪ್ ತಂದೆ ಹೇಳಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
Advertisement