

ಮೈಸೂರು: ರಾಜ್ಯದಲ್ಲಿ ಪುಂಡರ ಹಾವಳಿ ಮುಂದುವರೆದಿದ್ದು, ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಟ ಪ್ರಕರಣ ಹಸಿರಾಗಿರುವಂತೆಯೇ ಇತ್ತ ಮೈಸೂರಿನಲ್ಲಿ ಪುಂಡರ ಗ್ಯಾಂಗ್ ಅಪಾಯಕಾರಿ ಬೈಕ್ ವ್ಙೀಲಿಂಗ್ ಮಾಡಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.
ಹೌದು.. ಪುಂಡರ ಗ್ಯಾಂಗ್ ವೊಂದು ರಾತ್ರಿ ವೇಳೆ ರಸ್ತೆಗಳಲ್ಲಿ ಅಪಾಯಕಾರಿ ಬೈಕ್ ಸ್ಟಂಟ್ ಗಳನ್ನು ಮಾಡುತ್ತಿದ್ದು ಇದರಿಂದ ಇತರೆ ಸವಾರರಿಗೆ ತೊಂದರೆಯಾಗುತ್ತಿದೆ. ಮೈಸೂರಿನ ಸಯ್ಯಾಜಿ ರಾವ್ ರಸ್ತೆಯಲ್ಲಿ ದ್ವಿಚಕ್ರವಾಹನದಲ್ಲಿ ಬಂದ ಪುಂಡರ ಗ್ಯಾಂಗ್ ಬೈಕ್ ವೀಲಿಂಗ್ ಮಾಡಿರುವ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಇಬ್ಬರು ಪುಂಡರ ಗ್ಯಾಂಗ್ ದ್ವಿಚಕ್ರವಾಹನದಲ್ಲಿ ಪೊಲೀಸರ ಮುಂದೆಯೇ ಬೈಕ್ ವೀಲಿಂಗ್ ಮಾಡಿಕೊಂಡು ಕಿರುಚಾಡಿಕೊಂಡು ಹೋಗುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಪೊಲೀಸರ ಮುಂದೆ ಅವರು ಸಾಹಸಗಳನ್ನು ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೇಗವಾಗಿ ಬೈಕ್ ಚಲಾಯಿಸಿಕೊಂಡು ಜೋರಾಗಿ ಕೂಗಾಡುತ್ತಾ ಬೈಕ್ ಅನ್ನು ಅಡ್ಡಾದಿಡ್ಡಿ ಚಲಾಯಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅವರ ಕೃತ್ಯಗಳು ಹಾದುಹೋಗುವ ಇತರೆ ವಾಹನ ಸವಾರರನ್ನು ಸಹ ಭಯಭೀತಗೊಳಿಸಿದವು.
ಇದನ್ನು ನೋಡಿದ ನೆಟಿಜನ್‌ಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸುತ್ತಿದ್ದಾರೆ. ಈ ಘಟನೆ ವೈರಲ್ ಆಗುತ್ತಲೇ ಈ ವಿಡಿಯೋ ಆಧಾರದ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಮೈಸೂರು ಸಂಚಾರಿ ಪೊಲೀಸರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
Advertisement