

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸಕ್ಕರೆ ಕಾರ್ಖಾನೆಯೊಂದರಲ್ಲಿ ಬುಧವಾರ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ.
ಇಂದು ಮಧ್ಯಾಹ್ನ 2 ಗಂಟೆಗೆ ಈ ಘಟನೆ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ ಮತ್ತು ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಜಿಲ್ಲೆಯ ಸೂಪರಿಂಟೆಂಡೆಂಟ್ ಕೆ. ರಾಮರಾಜನ್ ಅವರು ತಿಳಿಸಿದ್ದಾರೆ.
ಗಾಯಾಳುಗಳನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
Advertisement