

ಬಾಗಲಕೋಟೆ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಉತ್ತರ ಕರ್ನಾಟಕದ ಜಾನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ‘ಮ್ಯೂಸಿಕ್ ಮೈಲಾರಿ’ ಜಾಮೀನು ಅರ್ಜಿಯನ್ನು ಗುರುವಾರ ಕೋರ್ಟ್ ವಜಾಗೊಳಿಸಿದೆ.
ಜಾಮೀನು ಕೋರಿ ಮ್ಯೂಸಿಕ್ ಮೈಲಾರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶೆ ಪ್ರೀತಿ ಸಗರ ಜೋಶಿ ಅವರು, ಅರ್ಜಿ ವಜಾಗೊಳಿಸಿ ಆದೇಶಿಸಿದ್ದಾರೆ.
ಆರ್ಕೆಸ್ಟ್ರಾ ಕಾರ್ಯಕ್ರಮದ ನಂತರ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮ್ಯೂಸಿಕ್ ಮೈಲಾರಿಯನ್ನು ಡಿಸೆಂಬರ್ 17 ರಂದು ಹಾಲಿಂಗಪುರ ಪೊಲೀಸರು ಬಂಧಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ ಸೇರಿ 6 ಜನರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಈ ಘಟನೆ ಅಕ್ಟೋಬರ್ 24 ರಂದು ಬೆಳಗಾವಿಯಲ್ಲಿ ನಡೆದಿದ್ದು, ಅಪ್ರಾಪ್ತ ಬಾಲಕಿ ಬೆಳಗಾವಿ ಮೂಲದವಳು ಎಂದು ತಿಳಿದುಬಂದಿದೆ.
ಅಕ್ಬೋಬರ್ 24ರಂದು ಬೆಳಗಾವಿ ಜಿಲ್ಲೆಯ ಒಂದು ಗ್ರಾಮದಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡಲು ಮ್ಯೂಸಿಕ್ ಮೈಲಾರಿ ಬಂದಿದ್ದರು. ಇದೇ ಆರ್ಕೆಸ್ಟ್ರಾದಲ್ಲಿ ನೃತ್ಯ ಮಾಡಲು ಅಪ್ರಾಪ್ತ ಬಾಲಕಿ ಸಹ ಬಂದಿದ್ದಳು. ಕಾರ್ಯಕ್ರಮ ಮುಗಿದ ಬಳಿಕ ಆಕೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದ್ದು, ಅದರ ವಿಡಿಯೋ ಸಹ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
Advertisement