

ಬೆಂಗಳೂರು: ರಾಜ್ಯದ ವಿವಿಧೆಡೆ ತಾಪಮಾನ ಕುಸಿತದಿಂದ ಚಳಿಯ ತೀವ್ರತೆ ಹೆಚ್ಚಾಗಿದೆ. ಮುಂದಿನ ಏಳು ದಿನ ರಾಜ್ಯಾದ್ಯಂತ ಒಣ ಹವೆ ಮುಂದುವರೆಯುವ ಸಾಧ್ಯತೆಯಿದ್ದು, ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಏಳು ದಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಜನವರಿ 9 ರಿಂದ 12 ರವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಭಾಗಶ: ಮೋಡ ಕವಿದ ವಾತಾವರಣ ಇರುವ ಸಂಭವವಿದ್ದು, ಮುಂಜಾನೆ ಮಂಜು ಕವಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement