

ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ಹಾಗೂ ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿದೆ. ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸಲಾಗಿದೆ.
ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರ ವಿವಾದ ಸೃಷ್ಟಿಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಣಯಕೈಗೊಂಡಿದೆ. ಪೊಲೀಸರ ಗನ್ ಹಾಗೂ ರಿವಾಲ್ವರ್ನಿಂದ ಫೈರಿಂಗ್ ಆಗಿಲ್ಲ, ಖಾಸಗಿ ಗನ್‌ನಿಂದ ಫೈರಿಂಗ್ ಆಗಿದೆ ಎಂದು ಎಡಿಜಿಪಿ ದೃಢಪಡಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಹೇಳಿದ್ದರು.
ಬಳ್ಳಾರಿ ಬ್ಯಾನರ್ ಗಲಭೆ ಪ್ರಕರಣ: 25 ಆರೋಪಿಗಳಿಗೆ ಜಾಮೀನು
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನ ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಮ್ ನಂಬರ್ 4ರಲ್ಲಿನ 25 ಆರೋಪಿಗಳಿಗೆ ಜಾಮೀನು ನೀಡಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣದ ಪ್ರಮುಖ ಆರೋಪಿ ಖಾಸಗಿ ಗನ್ ಮ್ಯಾನ್ ಗುರುಚರಣ್ ಸಿಂಗ್ ತನ್ನ ಬಳಿಯಿದ್ದ ಗನ್‌ನಿಂದ 12 ಎಂಎಂ ಬುಲೆಟ್ ಫೈರ್ ಮಾಡಿದ್ದನು. ಬಳ್ಳಾರಿ ಬ್ಯಾನರ್ ಗಲಾಟೆ ಸಂಬಂಧ ಬ್ರೂಸ್‌ಪೇಟೆ ಠಾಣೆಯಲ್ಲಿ ಒಟ್ಟು 6 ಪ್ರಕರಣ ದಾಖಲಾಗಿವೆ. ಗನ್‌ಮ್ಯಾನ್‌ಗಳಾದ ಗುರುಚರಣ್ ಸಿಂಗ್, ಬಲ್ಜಿತ್ ಸಿಂಗ್ ಹಾಗೂ ಮಹೇಂದ್ರ ಸಿಂಗ್ ಸೇರಿದಂತೆ ಕಾಂಗ್ರೆಸ್‌ನ 10, ಬಿಜೆಪಿಯ 11 ಕಾರ್ಯಕರ್ತರು ಸೇರಿದಂತೆ ಒಟ್ಟು 26 ಜನರನ್ನು ಪೊಲೀಸರು ಬಂಧಿಸಿದ್ದರು. ಅಂದು ಗುಂಡೇಟು ಬಿದ್ದು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಎಂಬಾತ ಮೃತಪಟ್ಟಿದ್ದನು.
Advertisement