ಗೃಹ ಇಲಾಖೆಯಲ್ಲಿ ಡಿ.ಕೆ ಶಿವಕುಮಾರ್ ಹಸ್ತಕ್ಷೇಪ; ಕುಮಾರಸ್ವಾಮಿ ಆರೋಪಕ್ಕೆ ಜಿ ಪರಮೇಶ್ವರ ತಿರುಗೇಟು

ಶಿವಕುಮಾರ್ ಅವರು ಉಪಮುಖ್ಯಮಂತ್ರಿ, ಸಚಿವ ಮತ್ತು ಸರ್ಕಾರದ ಪ್ರತಿನಿಧಿಯಾಗಿ ಬಳ್ಳಾರಿಗೆ ಹೋಗಿ ಮೃತ ವ್ಯಕ್ತಿಯ ಕುಟುಂಬವನ್ನು ಭೇಟಿ ಮಾಡಿದ್ದಾರೆ ಎಂದರು.
G Parameshwara
ಜಿ ಪರಮೇಶ್ವರ
Updated on

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪರಮೇಶ್ವರ ಅವರ ಗೃಹ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂಬ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರ ಆರೋಪವನ್ನು ಸಚಿವ ಜಿ ಪರಮೇಶ್ವರ ಶುಕ್ರವಾರ ತಳ್ಳಿಹಾಕಿದ್ದಾರೆ.

ಇತ್ತೀಚೆಗೆ ನಡೆದ ಬಳ್ಳಾರಿ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ಸಭೆ ಕರೆಯಲು ಶಿವಕುಮಾರ್ ಅವರ ಅಧಿಕಾರವನ್ನು ಪ್ರಶ್ನಿಸುತ್ತಾ, ಗೃಹ ಇಲಾಖೆಯ ವ್ಯವಹಾರಗಳಲ್ಲಿ ಶಿವಕುಮಾರ್ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಪರಮೇಶ್ವರ ಪ್ರತಿಕ್ರಿಯಿಸುತ್ತಿದ್ದರು.

'ಅವರು (ಶಿವಕುಮಾರ್) ಒಬ್ಬ ಜವಾಬ್ದಾರಿಯುತ ಸಚಿವರು, ಅವರು ಉಪಮುಖ್ಯಮಂತ್ರಿ. ಉಪಮುಖ್ಯಮಂತ್ರಿ ಕೂಡ ಕೇವಲ ಸಂಪುಟ ಸಚಿವರು ಮತ್ತು ಸಂವಿಧಾನದ ಪ್ರಕಾರ ಅವರಿಗೆ ಹೆಚ್ಚುವರಿ ಅಧಿಕಾರವಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದು ಸರಿ ಇರಬಹುದು. ಆದರೆ, ಸರ್ಕಾರಿ ಪ್ರತಿನಿಧಿಯಾಗಿ ಅವರು (ಶಿವಕುಮಾರ್) ಅಲ್ಲಿಗೆ ಹೋಗುವುದನ್ನು ತಪ್ಪು ಎನ್ನಲಾಗುವುದಿಲ್ಲ. ಅವರು ಸಂಪುಟ ಸಚಿವ ಮತ್ತು ಉಪಮುಖ್ಯಮಂತ್ರಿ ಜವಾಬ್ದಾರಿಯೊಂದಿಗೆ ಅಲ್ಲಿಗೆ ಹೋಗಿದ್ದಾರೆ. ಏಕೆಂದರೆ ನಾನು ಹೋಗಲು ಸಾಧ್ಯವಾಗಲಿಲ್ಲ' ಎಂದು ಪರಮೇಶ್ವರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಅವರು ಉಪಮುಖ್ಯಮಂತ್ರಿ, ಸಚಿವ ಮತ್ತು ಸರ್ಕಾರದ ಪ್ರತಿನಿಧಿಯಾಗಿ ಬಳ್ಳಾರಿಗೆ ಹೋಗಿ ಮೃತ ವ್ಯಕ್ತಿಯ ಕುಟುಂಬವನ್ನು ಭೇಟಿ ಮಾಡಿದ್ದಾರೆ ಎಂದರು.

ಕುಮಾರಸ್ವಾಮಿ ಅವರ ಪ್ರಶ್ನೆಯು ಶಿವಕುಮಾರ್ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವುದರ ಬಗ್ಗೆ ಮತ್ತು ಯಾರ ಅನುಮತಿಯೊಂದಿಗೆ ಎಂದು ಗಮನಸೆಳೆದಾಗ, ಗೃಹ ಸಚಿವರು, 'ಅನುಮತಿಯ ಅಗತ್ಯವೇನು? ಅವರು ಸರ್ಕಾರಿ ಪ್ರತಿನಿಧಿ' ಎಂದು ಹೇಳಿದರು.

'ಸಚಿವ ಸಂಪುಟವು ಸಾಮೂಹಿಕ ಜವಾಬ್ದಾರಿ, ಅದನ್ನು ಹಸ್ತಕ್ಷೇಪ ಎಂದು ಕರೆಯಲಾಗುವುದಿಲ್ಲ. ಅವರು ನಿಜವಾಗಿಯೂ ಮಧ್ಯಪ್ರವೇಶಿಸಿದ್ದರೆ, ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದ್ದರೆ ಮತ್ತು ಅದು ಬೇರೆಯದೇ ಪರಿಣಾಮವನ್ನು ಬೀರಿದ್ದರೆ, ನಾನು ಹಸ್ತಕ್ಷೇಪದ ಆರೋಪಗಳನ್ನು ಸ್ವೀಕರಿಸುತ್ತಿದ್ದೆ. ಕುಮಾರಸ್ವಾಮಿ ಈ ವಿಷಯಗಳನ್ನು ಹೇಗೆ ಅರ್ಥಮಾಡಿಕೊಂಡಿದ್ದಾರೆಂದು ನನಗೆ ತಿಳಿದಿಲ್ಲ' ಎಂದು ಅವರು ಹೇಳಿದರು.

ಶಿವಕುಮಾರ್ ಗೃಹ ಇಲಾಖೆಯ ಕಾರ್ಯಚಟುವಟಿಕೆಯಲ್ಲಿ ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಪರಮೇಶ್ವರ, ನಮ್ಮ ನಿರ್ಧಾರಗಳಲ್ಲಿ ಯಾರೂ ಹಸ್ತಕ್ಷೇಪ ಮಾಡಿಲ್ಲ. ಮುಖ್ಯಮಂತ್ರಿ ಮತ್ತು ನಾನು ಗೃಹ ಇಲಾಖೆಗೆ ಸಂಬಂಧಿಸಿದಂತೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಮತ್ತು ನಾವು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತೇವೆ' ಎಂದರು.

G Parameshwara
ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ; ಆಟಕ್ಕೆ ಮೂರು, ಲೆಕ್ಕಕ್ಕೆ ಎರಡು ಪಕ್ಷ: ಕುಮಾರಸ್ವಾಮಿ ಕಟುಕಿದ ಡಿಸಿಎಂ

ಜನವರಿ 1 ರಂದು ರಾತ್ರಿ ಬಳ್ಳಾರಿ ನಗರದ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಗಂಗಾವತಿ ಬಿಜೆಪಿ ಶಾಸಕ ಜಿ ಜನಾರ್ದನ ರೆಡ್ಡಿ ಅವರ ಬೆಂಬಲಿಗರ ನಡುವೆ ಬ್ಯಾನರ್ ಅಳವಡಿಕೆ ವಿಷಯವಾಗಿ ಘರ್ಷಣೆ ನಡೆದ ನಂತರ ಬಳ್ಳಾರಿಯ ಕೆಲವು ಭಾಗಗಳಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿ, ಕಲ್ಲು ತೂರಾಟ ನಡೆದಿದ್ದು, ಗುಂಡು ತಗುಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸಾವಿಗೀಡಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಬಳ್ಳಾರಿಯ ಜನಾರ್ದನ ರೆಡ್ಡಿ ಅವರ ನಿವಾಸದ ಮುಂದೆ ಭರತ್ ರೆಡ್ಡಿ ಅವರ ಬೆಂಬಲಿಗರು ವಾಲ್ಮೀಕಿ ಪ್ರತಿಮೆ ಅನಾವರಣಕ್ಕೆ ಸಂಬಂಧಿಸಿದ ಬ್ಯಾನರ್ ಅಳವಡಿಸುವ ವಿಚಾರವಾಗಿ ಗಲಾಟೆ ಪ್ರಾರಂಭವಾಯಿತು ಎಂದು ವರದಿಯಾಗಿದೆ.

ರಾಜ್ಯ ಕಾಂಗ್ರೆಸ್ ಮುಖ್ಯಸ್ಥರೂ ಆಗಿರುವ ಶಿವಕುಮಾರ್ ಇತ್ತೀಚೆಗೆ ಬಳ್ಳಾರಿಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಅವರು ಸಂತ್ರಸ್ತನ ಕುಟುಂಬವನ್ನು ಭೇಟಿ ಮಾಡಿದ್ದರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com