

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಗ್ರಾಮದ ಬಳಿ ಶನಿವಾರ ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಭೀಕರ ಅಪಘಾತದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ಮೃತ ದುರ್ದೈವಿಗಳನ್ನು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಾಂಡಾ ನಿವಾಸಿಯಾದ ರುಕ್ಮಿಣಿ ಬಾಯಿ ನಾಯಕ್(36), ಅವರ ಮಗಳು ಶಿವಾನಿ ನಾಯಕ್(6) ಮತ್ತು 4 ವರ್ಷದ ಮಗ ರೋಷನ್ ನಾಯಕ್ ಎಂದು ಗುರುತಿಸಲಾಗಿದೆ.
ಸದ್ಯ ಸ್ಥಳಕ್ಕೆ ಅಮೀನ್ಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಕಬ್ಬು ಕಟಾವು ಮಾಡುವ ಐವರು ಕಾರ್ಮಿಕರು ಟ್ರ್ಯಾಕ್ಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಕಮತಗಿ ಬಳಿ ಹುಕ್ ಕಟ್ ಆಗಿ ಟ್ರ್ಯಾಕ್ಟರ್ ಪಲ್ಟಿಯಾಗಿ ದುರಂತ ಸಂಭವಿಸಿದೆ.
Advertisement