

ಬೆಂಗಳೂರು: ರ್‍ಯಾಪಿಡೊ (Rapido) ಬೈಕ್ ಟ್ಯಾಕ್ಸಿ ಸವಾರನೊಬ್ಬ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಬೈಕ್ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ ಗೆ ತೆರಳಲು ಮಹಿಳಾ ಟೆಕ್ಕಿಯೊಬ್ಬರು ರ್‍ಯಾಪಿಡೊ ಬೈಕ್ ಬುಕ್ ಮಾಡಿದ್ದರು. ಪ್ರಯಾಣದ ವೇಳೆ ಬೈಕ್ ಸವಾರ ಪ್ರಯಾಣಿಕಳ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ಟೆಕ್ಕಿ ಜಗಳ ಮಾಡಿದ್ದರು. ಈ ವೇಳೆ ಸವಾರ ಟೆಕ್ಕಿಯ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸಿದ್ದು, ಎದೆ ಭಾಗಕ್ಕೆ ಕೈ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ದೂರು ದಾಖಲಿಸಿಕೊಂಡ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಆರೋಪಿ ವಿವೇಕ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
Advertisement