ಪ್ರವಾಸೋದ್ಯಮ ಅಭಿವೃದ್ಧಿ ಹೊಂದಲು ಕಾನೂನು ಮತ್ತು ಸುವ್ಯವಸ್ಥೆ ಮುಖ್ಯ: ಸಿಎಂ ಸಿದ್ದರಾಮಯ್ಯ

ಯಾವುದೇ ವ್ಯಕ್ತಿ ಅಥವಾ ಗುಂಪು ಧರ್ಮ ಅಥವಾ ಜಾತಿಯ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಎಲ್ಲಾ ಧರ್ಮಗಳು ದ್ವೇಷವನ್ನಲ್ಲ, ಪ್ರೀತಿ ಮತ್ತು ಸಾಮರಸ್ಯವನ್ನು ಪ್ರತಿಪಾದಿಸುತ್ತವೆ. ಒಂದು ಧರ್ಮವನ್ನು ಇನ್ನೊಂದು ಧರ್ಮದ ವಿರುದ್ಧ ಎತ್ತಿ ಹಿಡಿಯುವ ಮೂಲಕ ದೇಶಭಕ್ತಿ ಬೆಳೆಯಲು ಸಾಧ್ಯವಿಲ್ಲ.
Siddaramaiah
ಸಿಎಂ ಸಿದ್ದರಾಮಯ್ಯ
Updated on

ಮಂಗಳೂರು: ಪ್ರವಾಸೋದ್ಯಮ ಅಭಿವೃದ್ಧಿ ಹೊಂದಲು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಅತ್ಯಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆದ "ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ -2026"ರ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.

ಯಾವುದೇ ವ್ಯಕ್ತಿ ಅಥವಾ ಗುಂಪು ಧರ್ಮ ಅಥವಾ ಜಾತಿಯ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಎಲ್ಲಾ ಧರ್ಮಗಳು ದ್ವೇಷವನ್ನಲ್ಲ, ಪ್ರೀತಿ ಮತ್ತು ಸಾಮರಸ್ಯವನ್ನು ಪ್ರತಿಪಾದಿಸುತ್ತವೆ. ಒಂದು ಧರ್ಮವನ್ನು ಇನ್ನೊಂದು ಧರ್ಮದ ವಿರುದ್ಧ ಎತ್ತಿ ಹಿಡಿಯುವ ಮೂಲಕ ದೇಶಭಕ್ತಿ ಬೆಳೆಯಲು ಸಾಧ್ಯವಿಲ್ಲ. ಸಾಮಾಜಿಕ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಕವಿ ಕುವೆಂಪು ಅವರ "ಸರ್ವಜನಾಂಗದ ಶಾಂತಿಯ ತೋಟ" - ಎಲ್ಲಾ ಸಮುದಾಯಗಳಿಗೆ ಶಾಂತಿಯ ಉದ್ಯಾನ - ದೃಷ್ಟಿಕೋನವನ್ನು ಅನುಸರಿಸಬೇಕೆಂದು ಹೇಳಿದರು.

ಇದೇ ವೇಳೆ ಕರಾವಳಿ ಕರ್ನಾಟಕವನ್ನು ಹೂಡಿಕೆಗೆ ಅತ್ಯಂತ ಸೂಕ್ತವಾದ ಪ್ರದೇಶಗಳಲ್ಲಿ ಒಂದೆಂದು ಮುಖ್ಯಮಂತ್ರಿಗಳು ಬಣ್ಣಿಸಿದರು.

ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡುವವರಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡಲಿದೆ. ಪ್ರವಾಸೋದ್ಯಮ ಸಮಾವೇಶ -2026 ರಲ್ಲಿ ಬಂಡವಾಳ ಹೂಡಿಕೆ ಮಾಡಲು ಲೆಟರ್ ಆಫ್ ಇಂಟೆಂಟ್ ಗೆ ಅನೇಕರು ಸಹಿ ಹಾಕಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೆ ಮುಂದಾಗುವವರಿಗೆ ಸರ್ಕಾರ ನೆರವಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶಗಳಿರುವ ಜಿಲ್ಲೆಗಳು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರವಾಸೋದ್ಯಮ ನೀತಿ ರೂಪಿಸಿದೆ. ಕರ್ನಾಟಕದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಬೇಕಾದ ಅನೇಕ ಸ್ಥಳಗಳಲ್ಲಿದ್ದು, ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶಗಳಿವೆ. 2024 ರಿಂದ 29ರ ವರೆಗೆ ಐದು ವರ್ಷಗಳ ಪ್ರವಾಸೋದ್ಯಮ ನೀತಿ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.

Siddaramaiah
ಸಿದ್ದರಾಮಯ್ಯ ಅವರ CM ಅವಧಿ ಗುತ್ತಿಗೆ ಆಧಾರದಲ್ಲಿದೆ: ಹೆಚ್ ಡಿಕೆ ವ್ಯಂಗ್ಯ

ಸುಮಾರು 320 ಕಿಮೀ ಕರಾವಳಿ ಪ್ರದೇಶವಿದ್ದರೂ, ಇಲ್ಲಿಯವರೆಗೆ ಅದನ್ನು ಪ್ರವಾಸೋದ್ಯಮಕ್ಕೆ ಸೂಕ್ತವಾಗಿ ಬಳಸಿಕೊಂಡಿಲ್ಲ. ಜಾಗತಿಕವಾಗಿ ಗುರುತಿಸಲ್ಪಟ್ಟ ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ನಮ್ಮ ಸರ್ಕಾರ ಆಸಕ್ತಿ ವಹಿಸಿದೆ. ಈ ಭಾಗದಲ್ಲಿ ಬ್ಯಾಂಕಿಂಗ್, ಶಿಕ್ಷಣ ಮತ್ತು ಆರೋಗ್ಯಕ್ಕೆ ವಿಶೇಷವಾಗಿ ಆದ್ಯತೆ ನೀಡಿ ಅಭಿವೃದ್ಧಿಯಾಗಿದೆ. ಕರಾವಳಿಯ ಸರಾಸರಿ ಸಾಕ್ಷರತಾ ಪ್ರಮಾಣ 2011ರಲ್ಲಿ 88.56% ಇತ್ತು. ತೆರಿಗೆ ಕೊಡುವುದರಲ್ಲಿ ನಮ್ಮ ರಾಜ್ಯ ಮುಂದಿದೆ. ಜಿ ಎಸ್.ಟಿ ಸಂಗ್ರಹಣೆಯಲ್ಲಿ ಮಹಾರಾಷ್ಟ್ರದ ನಂತರದ ಸ್ಥಾನದಲ್ಲಿದ್ದು, ಇದರಲ್ಲಿ ಕರಾವಳಿ ಜಿಲ್ಲೆಗಳ ಪಾತ್ರ ಹಿರಿದಿದೆ. ಬೆಂಗಳೂರು ಬಿಟ್ಟರೆ ಮಂಗಳೂರು ಹೆಚ್ಚಿನ ಕೊಡುಗೆ ನೀಡುತ್ತಿದೆ. ಪ್ರವಾಸೋದ್ಯಮ ಅಭಿವೃದ್ಧಿಯಾದರೆ ಮಹಾರಾಷ್ಟ್ರವನ್ನು ಹಿಂದಿಕ್ಕುವ ಅವಕಾಶ ನಮಗಿದೆ.

ಮಂಗಳೂರಿಗೆ ಓದಲೆಂದು ದೇಶವಿದೇಶಗಳಿಂದ ಬರುತ್ತಾರೆ. ಆದರೆ ಇಲ್ಲಿನ ಜನ ಅರಬ್ ದೇಶಗಳಿಗೆ ಕೆಲಸ ಅರಸಿಕೊಂಡು ಹೋಗುವ ಪರಿಸ್ಥಿತಿ ಇರುವುದು ವಿಷಾದನೀಯ. ಇಲ್ಲೇ ಉಳಿದುಕೊಂಡು ದುಡಿಮೆ ಮಾಡುವ ಪ್ರಯತ್ನ ಮಾಡುವುದು ಅವಶ್ಯ. ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಸಾಧ್ಯವಿದೆ. ಮಂಗಳೂರಿನಲ್ಲಿ ಪಂಚತಾರ ಹೋಟೆಲ್ ಸ್ಥಾಪಿಸಲು ಪ್ರಕಾಶ್ ಶೆಟ್ಟರು ಮುಂದಾಗಿರುವುದು ಶ್ಲಾಘನೀಯ.

ಪ್ರವಾಸೋದ್ಯಮ ಬೆಳೆಯಲು ಕಾನೂನು ಸುವ್ಯವಸ್ಥೆ ಉತ್ತಮವಾಗಿರಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿಯ ವಾತಾವರಣ ನಿರ್ಮಾಣವಾಗಿರುವುದು ಸ್ವಾಗತಾರ್ಹ. ಧರ್ಮ, ಜಾತಿಯ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸವನ್ನು ಯಾರೂ ಮಾಡಬಾರದು. ಒಂದು ಧರ್ಮದ ಮೇಲೆ ಮತ್ತೊಂದು ಧರ್ಮವನ್ನು ಎತ್ತಿ ಕಟ್ಟುವುದರಿಂದ ದೇಶಭಕ್ತಿ ಬರುವುದಿಲ್ಲ. ದೇಶದಲ್ಲಿರುವ ಎಲ್ಲಾ ಧರ್ಮಗಳು ಪ್ರೀತಿಯನ್ನೇ ಸಾರುತ್ತವೆಯೇ ಹೊರತು ದ್ವೇಷ ಸಾರುವುದಿಲ್ಲ. ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಕುವೆಂಪು ಅವರು ಹೇಳಿದಂತೆ ನಾಡು ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು. ಪ್ರವಾಸೋದ್ಯಮದ ಬಗ್ಗೆ ಮಾಹಿತಿ ನೀಡುವ ಕೆಲಸವನ್ನು ಎಲ್ಲಾ ಮಾಧ್ಯಮಗಳು ಮಾಡಬೇಕು. ದಕ್ಷಿಣ ಕನ್ನಡದ ಜನ ಸಾಹಸ ಪ್ರವೃತ್ತಿಯಿರುವವರು. ಸ್ಥಳೀಯವಾಗಿ ಉದ್ಯಮಗಳನ್ನು ಸ್ಥಾಪಿಸಬೇಕು. ನಮ್ಮಲ್ಲಿ ಯಾವುದೇ ಕೊರತೆಗಳಿಲ್ಲ, ಬಂಡವಾಳ ಹೂಡಿಕೆಗೆ ಆಸಕ್ತಿಯ ಅಗತ್ಯವಿದೆ ಅಷ್ಟೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com