

ಬೆಂಗಳೂರು: ವೈಟ್‌ಫೀಲ್ಡ್ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದ್ದ ಆರು ವರ್ಷದ ವಲಸೆ ಬಾಲಕಿ ಕಿಡ್ನಾಪ್ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮತ್ತೊಂದು ಶಾಕಿಂಗ್ ವಿಚಾರವನ್ನು ಬಹಿಂಗ ಪಡಿಸಿದ್ದಾರೆ. ಹತ್ಯೆಗೂ ಮುನ್ನ ಆರೋಪಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.
ಆರೋಪಿ ಯೂಸುಫ್ ಮೀರ್ ನನ್ನು ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಯೂಸೂಪ್ ಮೀರ್ ಆರು ತಿಂಗಳ ಹಿಂದೆ ನಗರಕ್ಕೆ ಬಂದು ಸ್ಕ್ರ್ಯಾಪ್ ಸಂಗ್ರಹಕಾರರಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಮತ್ತು ಸಂತ್ರಸ್ತ ಬಾಲಕಿ ಕುಟುಂಬ ಪಟ್ಟಂದೂರು ಅಗ್ರಹಾರದಲ್ಲಿ ನೆರೆಹೊರೆಯವರಾಗಿದ್ದರು. ಘಟನೆಗೂ ಮೊದಲು ಸಂತ್ರಸ್ತೆಯ ಕುಟುಂಬ ಸದಸ್ಯರೊಂದಿಗೆ ಅವನಿಗೆ ಜಗಳವಿತ್ತು.
ಜನವರಿ 5 ರ ಬೆಳಿಗ್ಗೆ, ಬಾಲಕಿ ಮನೆಯ ಮುಂದೆ ಆಟವಾಡುತ್ತಿದ್ದಾಗ ಅವಳನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಿ, ನಂತರ ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ಶವವನ್ನು ಗೋಣಿ ಚೀಲದಲ್ಲಿ ತುಂಬಿ, ತನ್ನ ಸ್ಕ್ರ್ಯಾಪ್ ಸಂಗ್ರಹಿಸುವ ಸೈಕಲ್‌ನಲ್ಲಿ ಸಾಗಿಸಿ, ನಲ್ಲೂರಹಳ್ಳಿಯ ದೇವಸ್ಥಾನದ ಬಳಿಯ ಚರಂಡಿಗೆ ಎಸೆದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಜನವರಿ 6 ರಂದು ಸಂತ್ರಸ್ತೆಯ ಪೋಷಕರು ದೂರು ನೀಡಿದ ನಂತರ ಪೊಲೀಸರು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಬಾಲಕಿಯ ಶವ ಪತ್ತೆ ಮಾಡಿದ್ದರು. ಪೋಷಕರು ಆರಂಭದಲ್ಲಿ ಯೂಸುಫ್ ಮೀರ್ ಮೇಲೆ ಅನುಮಾನ ವ್ಯಕ್ತಪಡಿಸಿದರು, ಇದು ಪೊಲೀಸರು ಯೂಸುಫ್ ಮೀರ್ ರೈಲಿನಲ್ಲಿ ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಆತನನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಸಹಾಯ ಮಾಡಿತು.
ಪ್ರಾಥಮಿಕ ತನಿಖೆಯಲ್ಲಿ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಆತನ ವಿರುದ್ಧ ಈ ಹಿಂದೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ. ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯನ್ನು ಜಾರಿಗೊಳಿಸಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ.
Advertisement