ಲಕ್ಕುಂಡಿಯಲ್ಲಿ ನಿಧಿ ಒಪ್ಪಿಸಿದ ಕುಟುಂಬಕ್ಕೆ ಅಗತ್ಯ ನೆರವು: ಸಚಿವ ಎಚ್‌.ಕೆ. ಪಾಟೀಲ್

ಲಕ್ಕುಂಡಿಯನ್ನು ವಿಶ್ವ ಪರಂಪರೆಯ ತಾಣವೆಂದು ಘೋಷಿಸಲು ಸರ್ಕಾರ ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ. ಪತ್ತೆಯಾದ ನಿಧಿಯಲ್ಲಿ 466 ಗ್ರಾಂ ತೂಕದ ಚಿನ್ನದ ಆಭರಣಗಳು ಮತ್ತು 634 ಗ್ರಾಂ ತಾಮ್ರದ ವಸ್ತುಗಳು ಸೇರಿವೆ.
HK patil
ಎಚ್.ಕೆ ಪಾಟೀಲ್
Updated on

ಗದಗ: ರಿತ್ತಿ ಅವರ ಜಾಗದಲ್ಲಿ ಸಿಕ್ಕ ನಿಧಿಯಲ್ಲಿ 466 ಗ್ರಾಂ ತೂಕದಷ್ಟು ಚಿನ್ನಾಭರಣ ಇದ್ದವು. ಅವು ಜಿಲ್ಲಾಡಳಿತದ ವಶದಲ್ಲಿವೆ. ಇದು ಬೆಳಕಿಗೆ ಬರಲು ಕಾರಣನಾದ 14 ವರ್ಷದ ಪ್ರಜ್ವಲ್‌ ರಿತ್ತಿ ಪ್ರಾಮಾಣಿಕತೆ ಅನುಕರಣೀಯ ಎಂದು ಸಚಿವ ಎಚ್‌.ಕೆ.ಪಾಟೀಲ ಹೇಳಿದ್ದಾರೆ.

ನಿಧಿಗೆ ಸಂಬಂಧಿಸಿ ಲಕ್ಕುಂಡಿಯ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಮಾತನಾಡಿದ ಅವರು, ಈ ವಿಷಯ ಮುಖ್ಯಮಂತ್ರಿ ಅವರ ಗಮನಕ್ಕೆ ಬಂದಾಗ, ನಿಧಿ ಎಷ್ಟೇ ಇರಲಿ. ಪ್ರಾಮಾಣಿಕವಾಗಿ ಅದನ್ನು ಸರ್ಕಾರಕ್ಕೆ ಒಪ್ಪಿಸಿದ ಬಾಲಕನ ನಡೆ ನಿಧಿಗಿಂತಲೂ ದೊಡ್ಡದೆಂದು ಶ್ಲಾಘಿಸಿದರು ಎಂದು ಪಾಟೀಲ್ ತಿಳಿಸಿದ್ದಾರೆ.

ಲಕ್ಕುಂಡಿಯನ್ನು ವಿಶ್ವ ಪರಂಪರೆಯ ತಾಣವೆಂದು ಘೋಷಿಸಲು ಸರ್ಕಾರ ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ. ಪತ್ತೆಯಾದ ನಿಧಿಯಲ್ಲಿ 466 ಗ್ರಾಂ ತೂಕದ ಚಿನ್ನದ ಆಭರಣಗಳು ಮತ್ತು 634 ಗ್ರಾಂ ತಾಮ್ರದ ವಸ್ತುಗಳು ಸೇರಿವೆ, ಇದನ್ನು ಜಿಲ್ಲಾಡಳಿತ ತನ್ನ ವಶಕ್ಕೆ ತೆಗೆದುಕೊಂಡಿದೆ" ಎಂದು ಪಾಟೀಲ್ ಹೇಳಿದರು. "ಪ್ರಜ್ವಲ್ ತಾಮ್ರದ ಪೈಪ್ ಅನ್ನು ದೇವಸ್ಥಾನದ ಕೋಣೆಯಲ್ಲಿ ಸುರಕ್ಷಿತವಾಗಿ ಇಟ್ಟುಕೊಂಡು ಬೀಗ ಹಾಕಿದರು.

ಜ.26ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ರಿತ್ತಿ ಕುಟುಂಬದವರನ್ನು ಜಿಲ್ಲಾಡಳಿತ ಸನ್ಮಾನಿಸಲಿದೆ. ನೆರವು ನೀಡುವ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಲಿದ್ದು, ಈ ಮಾಹಿತಿಯನ್ನು ಅಂದೇ ಪ್ರಕಟಿಸಲಾಗುವುದು ಎಂದರು.

HK patil
'ಮುತ್ತು, ಹವಳ, ನೀಲಮಣಿ..'; ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ನಿಧಿ ಪತ್ತೆ; ಗ್ರಾಮಸ್ಥರಿಗೆ ತಲೆನೋವು!

ರಾಷ್ಟ್ರಕೂಟರು, ಚಾಲುಕ್ಯರು ಆಳ್ವಿಕೆಯ ಐತಿಹಾಸಿಕ ಹಿನ್ನೆಲೆಯುಳ್ಳ ಲಕ್ಕುಂಡಿ ವಿಶಿಷ್ಟ ಸ್ಥಳ. ಈಗ ಸಿಕ್ಕಿರುವ ನಿಧಿಯನ್ನು ವಸ್ತುಸಂಗ್ರಹಾಲಯದಲ್ಲಿ ಇಡಲಾಗುವುದು. ಲಕ್ಕುಂಡಿಯ ಪ್ರಾಚ್ಯಾವಶೇಷ ಸಂಗ್ರಹ ಅಭಿಯಾನ ನಡೆಸಿದಾಗ ಗ್ರಾಮಸ್ಥರು ಈಗಾಗಲೇ 1,100ಕ್ಕೂ ಹೆಚ್ಚು ಪ್ರಾಚ್ಯವಸ್ತುಗಳನ್ನು ಒಪ್ಪಿಸಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com