

ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆ ನಟೋರಿಯಸ್ ರೌಡಿ ಶೀಟರ್ ಒಬ್ಬನನ್ನು ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಗಮ್ಮನಪಾಳ್ಯ ನಿವಾಸಿ 28 ವರ್ಷದ ಮೊಹಮ್ಮದ್ ಶಬ್ಬೀರ್ ಎಂಬಾತನನ್ನು 6 ಜನ ದುಷ್ಕರ್ಮಿಗಳ ತಂಡ ನಡು ರಸ್ತೆಯಲ್ಲಿಯೇ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದೆ. ಸೋಮವಾರ ರಾತ್ರಿ ತಮ್ಮ ಸ್ನೇಹಿತನನ್ನ ಮಾತಾಡಿಸಿ ಮೊಹಮ್ಮದ್ ಶಬ್ಬೀರ್ ಸ್ನೇಹಿತರ ಜೊತೆ ಆಟೋದಲ್ಲಿ ವಾಪಸ್ ಆಗುತ್ತಿದ್ದನು. ಈ ವೇಳೆ ಮಂಗಮ್ಮನಪಾಳ್ಯ ಮುಖ್ಯ ರಸ್ತೆಯ ತಿರುವಿನಲ್ಲಿ ಆರು ಮಂದಿ ದುಷ್ಕರ್ಮಿಗಳು ಖಾರದ ಪುಡಿ ಏಕಾಏಕಿ ಎರಚಿ ಮಚ್ಚು, ಲಾಂಗ್ ನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಶಬ್ಬೀರ್ ಸ್ಥಳದಲ್ಲೇ ಮೃತಪಟ್ಟಿದ್ದರೆ ಉಳಿದ ಐವರಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement