

ಶಿವಮೊಗ್ಗ: ಶಿವಮೊಗ್ಗದ ತೀರ್ಥಹಳ್ಳಿಯ ಭಾರತಿಪುರ ಕ್ರಾಸ್ ಬಳಿ KSRTC ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಆಗಿ ಮೂವರು ಮೃತಪಟ್ಟಿದ್ದಾರೆ.
ರಿಯಾಜ್ ಅಹಮದ್ ಹಾಗೂ ಫಾತಿಮಾ ಮೃತರು. ಮಗು, ಕಾರಿನ ಚಾಲಕ ಮತ್ತು ಪಕ್ಕದ ಸೀಟಿನಲ್ಲಿದ್ದ ಮಹಿಳೆ ಮೃತಪಟ್ಟಿದ್ದು ಕಾರಿನಲ್ಲಿದ್ದ ಉಳಿದ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇವರೆಲ್ಲರೂ ಚನ್ನಗಿರಿಯಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ, ವಾಪಸ್ ಕಿಗ್ಗಾಕ್ಕೆ ಹೋಗುತ್ತಿದ್ದರು. ಮಂಗಳೂರಿನಿಂದ ಮಂತ್ರಾಲಯಕ್ಕೆ ಹೋಗುತ್ತಿದ್ದ ಬಸ್ ಡಿಕ್ಕಿಯಾಗಿದೆ. ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೇಸ್ ದಾಖಲಿಸಿಕೊಂಡಿದ್ದಾರೆ.
ಚೆನ್ನಗಿರಿಯಿಂದ ಶೃಂಗೇರಿ ಕಡೆಗೆ ಸ್ವಿಫ್ಟ್ ಕಾರಿನಲ್ಲಿ 6 ಜನರು ತೆರಳುತ್ತಿದ್ದರೆ ಮಂಗಳೂರಿನಿಂದ ರಾಯಚೂರು ಕಡೆಗೆ ಕೆಎಸ್‌ಆರ್‌ಟಿಸಿ ಬಸ್ ಹೋಗುತ್ತಿತ್ತು. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದರೆ ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ.
Advertisement