ಬೆಂಗಳೂರು: Lalbagh ಮಾದರಿಯಲ್ಲಿ ಮತ್ತೆರಡು ಉದ್ಯಾನ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ..!

ಮೆಟ್ರೋ ಹಾಗೂ ಸುರಂಗದಿಂದ ಲಾಲ್‍ಬಾಗ್‍ಗೆ ತೊಂದರೆಯಾಗುತ್ತದೆ ಎಂದು ಕೆಲವರು ರಾಜಕಾರಣ ಮಾಡಿದ್ದಾರೆ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಈ ಐತಿಹಾಸಿಕ ಉದ್ಯಾನ ಕಾಪಾಡಲು ಬೇರೆಯವರಿಗಿಂತ ಹೆಚ್ಚಿನ ಆಸಕ್ತಿ ನನಗಿದೆ.
Flower show
ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ
Updated on

ಬೆಂಗಳೂರು: ಬೆಂಗಳೂರು ಉತ್ತರ ಭಾಗದ ಅರಣ್ಯ ಇಲಾಖೆ ಜಾಗದಲ್ಲಿ ಬಸವಣ್ಣ ಅವರ ಹೆಸರಿನಲ್ಲಿ ಲಾಲ್ ಬಾಗ್ ಮಾದರಿ ಉದ್ಯಾನ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ತೋಟಗಾರಿಕೆ ಇಲಾಖೆಯ ವತಿಯಿಂದ ನಗರದ ಲಾಲ್‍ಬಾಗ್‍ನಲ್ಲಿ ಬುಧವಾರ ಆಯೋಜಿಸಿದ ತೇಜಸ್ವಿ ವಿಸ್ಮಯ: ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬದುಕು-ಬರಹ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರು ಉದ್ಯಾನ ನಗರಿ ಎಂದು ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪಡೆದಿದೆ. ಹೀಗಾಗಿ ಈ ಉದ್ಯಾನಗಳ ನಿರ್ಮಾಣಕ್ಕೆ ಜಿಬಿಎ, ಪಾಲಿಕೆ ವತಿಯಿಂದ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದ್ದೇನೆ. ನಾನು ನಗರದ ಪಾರ್ಕ್‍ಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿ ನೋಡಿ, ಜನರ ಅಭಿಪ್ರಾಯ ಪಡೆದು ಅನೇಕ ಅಭಿವೃದ್ಧಿ ಕೆಲಸ ಕೈಗೊಳ್ಳಲು ಸೂಚಿಸಿದ್ದೇನೆ. ನಮ್ಮ ರಾಜ್ಯದಿಂದ ಹೊರ ದೇಶಗಳಿಗೆ ಪ್ರತಿ ವಾರ 17 ವಿಮಾನದಷ್ಟು ಹೂ, ತರಕಾರಿ ರಫ್ತಾಗುತ್ತಿದೆ. ಅಂತರ್‍ರಾಷ್ಟ್ರೀಯ ಮಟ್ಟದ ಹೂ, ತರಕಾರಿ ಮಾರುಕಟ್ಟೆ ನಿರ್ಮಿಸಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.

ಮೆಟ್ರೋ ಹಾಗೂ ಸುರಂಗದಿಂದ ಲಾಲ್‍ಬಾಗ್‍ಗೆ ತೊಂದರೆಯಾಗುತ್ತದೆ ಎಂದು ಕೆಲವರು ರಾಜಕಾರಣ ಮಾಡಿದ್ದಾರೆ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಈ ಐತಿಹಾಸಿಕ ಉದ್ಯಾನ ಕಾಪಾಡಲು ಬೇರೆಯವರಿಗಿಂತ ಹೆಚ್ಚಿನ ಆಸಕ್ತಿ ನನಗಿದೆ. ನಾಗರೀಕರ ಸೌಲಭ್ಯಕ್ಕೆ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ.

ಬೆಂಗಳೂರು ನಗರದ ಜನಸಂಖ್ಯೆ 70 ಲಕ್ಷದಿಂದ 1.50 ಕೋಟಿಗೆ ಏರಿಕೆಯಾಗಿದೆ. ಹೀಗಾಗಿ ಇಲ್ಲಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸಬೇಕಾಗಿದೆ. ಎಲ್ಲಾ ಪಾರ್ಕ್ ಹಾಗೂ ಕೆರೆ ಉಳಿಸುವುದು ನಮ್ಮ ಕರ್ತವ್ಯ. ಅದಕ್ಕೆ ಅಗತ್ಯ ಕ್ರಮವನ್ನು ನಮ್ಮ ಸರಕಾರ ಕೈಗೊಳ್ಳುತ್ತಿದೆ ಎಂದು ಶಿವಕುಮಾರ್ ಭರವಸೆ ನೀಡಿದರು.

Flower show
ಗಣರಾಜ್ಯೋತ್ಸವ 2026: ಜನವರಿ 14ರಿಂದ ಲಾಲ್​​ಬಾಗ್​ಫ್ಲವರ್ ಶೋ; ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತ, ಈ ಬಾರಿ ಥೀಮ್ ಏನು ಗೊತ್ತಾ?

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com