

ಧಾರವಾಡ: ಪತ್ನಿಯನ್ನು ಕೊಲೆ ಮಾಡಿ 14 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿದ್ದ ವ್ಯಕ್ತಿ ಜೈಲಿನ ಆವರಣದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ಧಾರವಾಡದ ಕೇಂದ್ರ ಕಾರಾಗೃಹದೊಳಗೆ ನಡೆದಿದೆ.
ಮೃತ ವ್ಯಕ್ತಿಯನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪುರ ಗ್ರಾಮದ ಈಶ್ವರಪ್ಪ ಪೂಜಾರ್ ಎಂದು ಗುರುತಿಸಲಾಗಿದೆ. ಸುಮಾರು ಏಳು ವರ್ಷಗಳ ಹಿಂದೆ, ಅವರಿಗೆ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಅವರು ತಮ್ಮ ಶಿಕ್ಷೆಯ ಅರ್ಧಕ್ಕಿಂತ ಹೆಚ್ಚು ಅವಧಿಯನ್ನು ಜೈಲಿನಲ್ಲಿ ಕಳೆದಿದ್ದರು.
ಜೈಲಿನ ಆವರಣದಲ್ಲಿರುವ ನಿರ್ಮಾಣ ಸ್ಥಳದಲ್ಲಿ ಪೂಜಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜೈಲಿನ ಮೂಲಗಳು ತಿಳಿಸಿವೆ.
ಕೆಲಸ ಮುಗಿಸಿದ ನಂತರ ತಡರಾತ್ರಿಯವರೆಗೂ ಪೂಜಾರ್ ತನ್ನ ಸೆಲ್‌ಗೆ ಹಿಂತಿರುಗಿಲ್ಲ. ನಂತರ ಪೊಲೀಸರು ಆತನನ್ನು ಹುಡುಕಲು ಪ್ರಾರಂಭಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮೃತದೇಹವನ್ನು ಆಸ್ಪತ್ರೆಗೆ ಕಳುಹಿಸಲಾಗಿದ್ದು, ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದಿನ ಕಾರಣ ತಿಳಿದುಬಂದಿಲ್ಲ ಮತ್ತು ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಿರ್ಮಾಣ ಸ್ಥಳದಲ್ಲಿ ಬಳಸಲಾದ ಹಗ್ಗದ ಸಹಾಯದಿಂದ ಅವರು ನೇಣು ಬಿಗಿದುಕೊಂಡಿದ್ದಾರೆ. ಪೂಜಾರ್ ಜೈಲಿನಲ್ಲಿ ಉತ್ತಮ ನಡವಳಿಕೆಗೆ ಹೆಸರುವಾಸಿಯಾಗಿದ್ದರು ಎಂದು ಹೇಳಲಾಗಿದೆ.
ಕೈದಿಗಳನ್ನು ಅವರಿಗೆ ನಿಯೋಜಿಸಲಾದ ಕೆಲಸದ ನಂತರ ಅವರ ಕೋಣೆಗಳಿಗೆ ಮರಳಿ ಕರೆತರುವ ಜವಾಬ್ದಾರಿ ಹೊತ್ತಿದ್ದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಕಾರಾಗೃಹದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement