

ಬೆಂಗಳೂರು: ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಗುರುವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಬ್ಯಾಂಕಾಕ್‌ನಿಂದ ಬಂದ ಇಬ್ಬರು ಪ್ರಯಾಣಿಕರನ್ನು ಬಂಧಿಸಿದ್ದು, ಅವರಿಂದ ಭಾರಿ ಪ್ರಮಾಣದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬೆಂಗಳೂರು ಕಸ್ಟಮ್ಸ್ , ಬ್ಯಾಂಕಾಕ್‌ನಿಂದ ಆಗಮಿಸಿದ ಇಬ್ಬರು ಪ್ರಯಾಣಿಕರನ್ನು ತಡೆದು ರೂ. 2.18 ಕೋಟಿ ಮೌಲ್ಯದ 6.24 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಇಬ್ಬರೂ ಆರೋಪಿಗಳನ್ನು ಎನ್‌ಡಿಪಿಎಸ್ ಕಾಯ್ದೆ, 1985 ರ ಅಡಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದೆ.
ಟರ್ಮಿನಲ್ -2 ನಲ್ಲಿ ಬ್ಯಾಗೇಜ್ ತಪಾಸಣೆ ವೇಳೆ ಮಾದಕ ವಸ್ತು ಪತ್ತೆಯಾಗಿದೆ. ಪ್ರಯಾಣಿಕರ ಲಗೇಜ್ ನಲ್ಲಿ ಹೆಚ್ಚಿನ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಕಳ್ಳ ಸಾಗಣೆ ಮಾಡಲಾಗುತಿತ್ತು. ಎಲ್ಲಿಂದ ಈ ಗಾಂಜಾವನ್ನು ಕಳ್ಳಸಾಗಣೆ ಮಾಡಲಾಗುತಿತ್ತು ಎಂಬುದರ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
Advertisement