

ಕಲಬುರಗಿ: ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ವಿರುದ್ಧ ಸಭೆಯಲ್ಲಿಯೇ ಸಿಬ್ಬಂದಿಯಿಂದ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ. ಮಲ್ಲಣ್ಣ ಯಲಗೋಡ ಹಾಗೂ ಸಿಬ್ಬಂದಿ ನಡುವಿನ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ತಹಶಿಲ್ದಾರ್ ಕಾಟಕ್ಕೆ ಬೇಸತ್ತ ಸಿಬ್ಬಂದಿ ಮೇಲಧಿಕಾರಿಗಳಿಗೆ ದೂರು ನೀಡಿದ್ದಾರೆ. ವೈರಲ್ ಆಗಿರುವ ಆಡಿಯೋದಲ್ಲಿ ತಹಶಿಲ್ದಾರ್ ಮಲ್ಲಣ್ಣ, ನನ್ನ ಹೆಸರಲ್ಲಿ ನೀವು ಹಣ ಮಾಡುತ್ತೀರಿ. ಹಾಗಾಗಿ ನನಗೂ ಹಣ ನೀಡಿ ಎಂದು ಸಿಬ್ಬಂದಿಗಳಿಗೆ ಧಮ್ಕಿ ಹಾಕಿದ್ದಾರೆ. ಆಡಿಯೋ ವೈರಲ್ ಆಗುತ್ತಿದ್ದಂತೆ ತಹಶಿಲ್ದಾರ್ ಮಲ್ಲಣ್ಣ, ಆರು ತಿಂಗಳ ಹಿಂದೆ ಕನ್ನಡ ಭವನದಲ್ಲಿ ನಡೆದಿದ್ದ ಕಾರ್ಯಕ್ರಮದ ವಿಚಾರವಾಗಿ ನಾನು ಸಿಬ್ಬಂದಿಗಳ ಸಭೆ ನಡೆಸಿ ಚರ್ಚಿಸಿದ್ದೆ ಹೊರತು ನಾನು ಯಾರ ಬಳಿಯೂ ಹಣ ಕೇಳಿಲ್ಲ. ನನ್ನ ವಿರುದ್ಧದ ಆರೋಪ ಸುಳ್ಳು ಎಂದಿದ್ದಾರೆ.
Advertisement