

ಗದಗ: ಗದಗದ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಮುಂದುವರಿದಿದ್ದು, ಉತ್ಖನನ ಸ್ಥಳ ಪಕ್ಕದ ಗೋಡೆಯಲ್ಲಿ ಪುರಾತನ ಕಾಲದ ಶಿವಲಿಂಗವೊಂದು ಪತ್ತೆಯಾಗಿದೆ.
ನಿಧಿ ಶೋಧದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಜಾಗಕ್ಕೆ ಸಮೀಪದಲ್ಲಿಯೇ ಈ ಲಿಂಗ ಕಂಡುಬಂದಿದೆ. ಸಂಪೂರ್ಣವಾಗಿ ಡೆಮಾಲಿಶ್ ಮಾಡಿದ ಶಾಲೆಯ ಗೋಡೆಯ ಭಾಗದಲ್ಲಿ ಗ್ರಾಮಸ್ಥರ ಕಣ್ಣಿಗೆ ಈ ಶಿವಲಿಂಗ ಮೊದಲು ಬಿದ್ದಿದೆ. ಈ ಲಿಂಗವು ಬಹಳ ಹಳೆಯ ಕಾಲದ್ದಾಗಿರಬಹುದು ಎಂದು ಸ್ಥಳೀಯರು ಊಹಿಸಿದ್ದಾರೆ.
ಪುರಾತತ್ವ ಇಲಾಖೆಯು ಈ ಲಿಂಗದ ಕುರಿತು ಪರಿಶೀಲನೆ ನಡೆಸುತ್ತಿದ್ದು, ಇದು ಯಾವ ಕಾಲಮಾನಕ್ಕೆ ಸೇರಿದ್ದು ಎಂಬ ಬಗ್ಗೆ ಸ್ಪಷ್ಟಪಡಿಸಬೇಕಿದೆ.
ಮೊದಲು ಈ ಪ್ರದೇಶ ಸಪ್ತ ಗ್ರಾಮಗಳ ಅಗ್ರಹಾರವಾಗಿತ್ತು. ಈ ಅಗ್ರಹಾರ ಸೊಕಮನಕಟ್ಟಿ, ತಂಗಾಬೆಂಚಿ, ಜವಳಬೆಂಚಿ, ನರಸಿಪುರ, ಮೊಟಬಸಪ್ಪ, ಬೂದಿಬಸಪ್ಪ, ಲಕ್ಕುಂಡಿ ಗ್ರಾಮಗಳನ್ನು ಒಳಗೊಂಡಿತ್ತು.
ವಿಜಯನಗರ ಅರಸರ ಆಳಿಕ್ವೆ ಅಧಿಪತ್ಯದ ನಂತರ ಏಳು ಗ್ರಾಮದ ಜನರು ಲಕ್ಕುಂಡಿಗೆ ಬಂದು ನೆಲೆಸಿದರು. ಇಲ್ಲಿ ನಾಣ್ಯಗಳನ್ನು ತಯಾರಿಸುವ ಟಂಕಸಾಲೆಗಳಿದ್ದವು ಎಂಬ ಇತಿಹಾಸವಿದೆ.
Advertisement