

ಬೆಂಗಳೂರು: ರಾಜ್ಯದಲ್ಲಿ ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ಪೊಲೀಸರ ರಕ್ಷಣೆ ಒದಗಿಸುವುದಾಗಿ ರಾಜ್ಯ ಸರ್ಕಾರ ಹೇಳಿದೆ.
ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಶನಿವಾರ 'ಹಿರಿಯ ಅಧಿಕಾರಿಗಳ ವಾರ್ಷಿಕ ಸಮ್ಮೇಳನ'ದಲ್ಲಿ ಗೃಹ ಸಚಿವ ಪರಮೇಶ್ವರ್ ಅವರು ಮಾತನಾಡಿದ್ದು, ಈ ಕುರಿತು ಮಾಹಿತಿ ನೀಡಿದರು.
ಇತ್ತೀಚೆಗೆ ಧಾರವಾಡ ಜಿಲ್ಲೆಯಲ್ಲಿ ನಡೆದಿದ್ದ ಆರು ತಿಂಗಳ ಗರ್ಭಿಣಿಯ ಮರ್ಯಾದೆಗೇಡು ಹತ್ಯೆ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು. ಮದುವೆ ಮುನ್ನ ತಮ್ಮ ಕುಟುಂಬದವರಿಂದಲೇ ಅನ್ಯಜಾತಿಯುವತಿ ಅಥವಾ ಯುವಕ ಎದುರಿಸುತ್ತಾರೆ. ಅಂಥವರು ರಕ್ಷಣೆ ಕೋರಿ ಬಗ್ಗೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದಲ್ಲಿ ಇಂಥ ದೂರುಗಳ ಬಗ್ಗೆ ಪೊಲೀಸರು ನಿರ್ಲಕ್ಷ್ಯ ವಹಿಸಬಾರದು. ಕೂಡಲೇ ಬೆದರಿಕೆಯಿಂದ ನಲುಗಿದವರಿಗೆ ಭದ್ರತೆ ಕಲ್ಪಿಸಬೇಕು ಎಂದು ಹೇಳಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲಿನ ದಲಿತರ ಮೇಲಿನ ದೌರ್ಜನ್ಯ ತಡೆಗೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಠಾಣೆಗಳನ್ನು ಸ್ಥಾಪಿಸಲಾಗಿದೆ. ಆದರೆ ಶೋಷಿತರ ರಕ್ಷಣೆಗೆ ಪೊಲೀಸರು ದಕ್ಷತೆಯಿಂದ ಕೆಲಸ ಮಾಡುತ್ತಿಲ್ಲ. ಅಂತರ್ಜಾತಿ ವಿವಾಹಗಳ ಬಗ್ಗೆ ಡಿಸಿಆರ್‌ಇಪೊಲೀಸರು ಗಮನ ಹರಿಸಬೇಕು ತಿಳಿಸಿದರು.
Advertisement