GBA ಚುನಾವಣೆ: EVM ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆಗೆ ಚುನಾವಣಾ ಆಯೋಗದ ನಿರ್ಧಾರ

ದೇಶಾದ್ಯಂತ ವೋಟ್ ಚೋರಿ ಕುರಿತಂತೆ ಕಾಂಗ್ರೆಸ್ ನಿರಂತರ ಆರೋಪಗಳನ್ನು ಮಾಡುತ್ತಿದ್ದು ಇದರ ಮಧ್ಯೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗಳನ್ನು ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್‌ಗಳ ಮೂಲಕ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ದೇಶಾದ್ಯಂತ ವೋಟ್ ಚೋರಿ ಕುರಿತಂತೆ ಕಾಂಗ್ರೆಸ್ ನಿರಂತರ ಆರೋಪಗಳನ್ನು ಮಾಡುತ್ತಿದ್ದು ಇದರ ಮಧ್ಯೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗಳನ್ನು ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್‌ಗಳ ಮೂಲಕ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.

ಮೇ 25ರ ನಂತರ ನಡೆಯಲಿರುವ ಈ ಚುನಾವಣೆಗಳಲ್ಲಿ ಮತಪತ್ರಗಳ ಬಳಕೆಗೆ ಚುನಾವಣಾ ಆಯೋಗವು ತನ್ನದೇ ಆದ ಕಾರಣಗಳನ್ನು ನೀಡಿದ್ದು, ಬ್ಯಾಲೆಟ್ ಪೇಪರ್‌ಗಳನ್ನು ಬಳಸಬಾರದು ಎಂದು ಸುಪ್ರೀಂ ಕೋರ್ಟ್ ಎಲ್ಲಿಯೂ ಹೇಳಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ. ಅಲ್ಲದೆ, ಚುನಾವಣಾ ಆಯೋಗವು ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಮತಪತ್ರಗಳ ಬಳಕೆ ತಮ್ಮ ನಿರ್ಧಾರ ಎಂದು ತಿಳಿಸಿದೆ. ಆದಾಗ್ಯೂ ಈ ನಿರ್ಧಾರ ಹೊಸ ಚರ್ಚೆಗೆ ಕಾರಣವಾಗಿದೆ.

ಐದು ಮಹಾನಗರ ಪಾಲಿಕೆಗಳ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,91,411 ಮತದಾರರಿದ್ದಾರೆ ಎಂದು ವಿಶೇಷ ಆಯುಕ್ತ ಆರ್. ರಾಮಚಂದ್ರನ್ ತಿಳಿಸಿದ್ದಾರೆ. 2025ರ ಅಕ್ಟೋಬರ್ 1ರ ಆಧಾರದ ಮೇಲೆ ಬೆಂಗಳೂರು ಮಧ್ಯ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮದಾದ್ಯಂತ 369 ವಾರ್ಡ್‌ಗಳಿವೆ. 45,69,193 ಪುರುಷರು, 43,20,583 ಮಹಿಳೆಯರು ಮತ್ತು 1,635 ಇತರರನ್ನು ಒಳಗೊಂಡಿದೆ. SIR ಕುರಿತಂತೆ ಬಿಎಲ್‌ಒ ಪರಿಶೀಲನೆ 2026ರ ಜನವರಿ 20 ರಿಂದ ಫೆಬ್ರವರಿ 3ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಮತದಾರರ ಪಟ್ಟಿಯ ಕುರಿತು ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಜನರಿಗೆ ಅವಕಾಶ ನೀಡಲಾಗುವುದು. ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಫೆಬ್ರವರಿ 4 ರಿಂದ ಫೆಬ್ರವರಿ 18 ರವರೆಗೆ ನಡೆಯಲಿದೆ. ಅಂತಿಮ ಮತದಾರರ ಪಟ್ಟಿಯನ್ನು ಮಾರ್ಚ್ 16 ರಂದು ಪ್ರಕಟಿಸಲಾಗುವುದು. ಒಟ್ಟು 369 ವಾರ್ಡ್‌ಗಳಲ್ಲಿ 8,044 ಮತಗಟ್ಟೆಗಳಿರುತ್ತವೆ ಎಂದು ಅವರು ಹೇಳಿದರು.

ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳನ್ನು ಸಹ ಮತಪತ್ರಗಳನ್ನು ಬಳಸಿ ನಡೆಸಲಾಗುವುದು ಎಂದು ಅವರು ಹೇಳಿದರು. SSLC ಮತ್ತು PUC ಪರೀಕ್ಷೆಗಳು ಮುಗಿದ ನಂತರ, ಮೇ 25ರ ನಂತರ ತಾತ್ಕಾಲಿಕವಾಗಿ ಚುನಾವಣೆಗಳನ್ನು ನಡೆಸಲಾಗುವುದು ಎಂದು ಸಂಗ್ರೇಶಿ ಹೇಳಿದರು. ಚುನಾವಣೆಗಳನ್ನು ನಡೆಸಲು ಎರಡು ಉತ್ತಮ ಪದ್ಧತಿಗಳಿವೆ. ಮತಪತ್ರಗಳನ್ನು ಆರಂಭದಿಂದಲೂ ಬಳಸಲಾಗುತ್ತಿತ್ತು. ಆದರೆ ಕಳೆದ 20-30 ವರ್ಷಗಳಿಂದ ಇವಿಎಂಗಳನ್ನು ಬಳಸಲಾಗುತ್ತಿದೆ. ಮತಪತ್ರಗಳ ಬಳಕೆಯನ್ನು ಕಾನೂನು ಅಥವಾ ಸುಪ್ರೀಂ ಕೋರ್ಟ್ ಸಹ ನಿಷೇಧಿಸಿಲ್ಲ ಎಂದು ಹೇಳಿದ್ದು ಮತಪತ್ರ ಬಳಸುವ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಸಂಗ್ರಹ ಚಿತ್ರ
ಬಿಡ್ ದಾರರ ನಿರಾಸಕ್ತಿ: ಐದು ನಿಗಮಗಳ ಕಚೇರಿ ನಿರ್ಮಾಣಕ್ಕೆ ಮೂರನೇ ಬಾರಿ ಟೆಂಡರ್‌ ಕರೆದ GBA

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಭವಿಷ್ಯದ ಎಲ್ಲಾ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎಲೆಕ್ಟ್ರಾನಿಕ್ ಮತಯಂತ್ರಗಳ ಬದಲಿಗೆ ಮತಪತ್ರ ಬಳಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ (ಎಸ್‌ಇಸಿ) ಶಿಫಾರಸು ಮಾಡಲು ನಿರ್ಧರಿಸಿತ್ತು. ಇವಿಎಂಗಳ ಬಗ್ಗೆ ಜನರಲ್ಲಿ ವಿಶ್ವಾಸ ಮತ್ತು ವಿಶ್ವಾಸಾರ್ಹತೆಯ ಕುಸಿತ ಕಂಡುಬಂದಿದೆ ಎಂದು ಹೇಳಿಕೊಂಡಿತ್ತು. ಇನ್ನು ಅಮೆರಿಕದಂತಹ ಅಭಿವೃದ್ಧಿ ಹೊಂದಿದ ದೇಶಗಳು ಸಹ ಮತಪತ್ರಗಳನ್ನು ಬಳಸುತ್ತವೆ ಎಂದು ರಾಜ್ಯದ ಮುಖ್ಯ ಚುನಾವಣಾ ಆಯುಕ್ತರು ಹೇಳಿದರು. ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳನ್ನು ಹೊರತುಪಡಿಸಿ, ಗ್ರಾಮ ಪಂಚಾಯತ್, ಸಹಕಾರಿ ಚುನಾವಣೆಗಳಂತಹ ಹೆಚ್ಚಿನ ಚುನಾವಣೆಗಳು ಮತಪತ್ರಗಳನ್ನು ಬಳಸಿ ನಡೆಯುತ್ತವೆ. ಆದಾಗ್ಯೂ, ಕಳೆದ ಬಾರಿ 2015ರಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗಳು ಇವಿಎಂ ಬಳಸಿ ನಡೆದವು ಎಂದು ಅವರು ಗಮನಿಸಿದರು.

ಮತಪತ್ರಗಳನ್ನು ಬಳಸುವ ನಿರ್ಧಾರವು ಸರ್ಕಾರದ ಒತ್ತಡದಲ್ಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಚುನಾವಣೆಯು ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಕಾನೂನು ಬ್ಯಾಲೆಟ್ ಪೇಪರ್‌ಗಳು ಅಥವಾ ಇವಿಎಂಗಳನ್ನು ಬಳಸಿಕೊಂಡು ಚುನಾವಣೆಗಳನ್ನು ನಡೆಸಲು ಅವಕಾಶ ನೀಡಿದಂತೆ, ಆಯೋಗವು ನಿರ್ಧರಿಸುವ ವಿವೇಚನೆಯನ್ನು ಹೊಂದಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com