

ಬೆಳಗಾವಿ: ಮಚ್ಚೆ ಗ್ರಾಮದಲ್ಲಿ ನಡೆದ ಮೆರವಣಿಗೆ ವೇಳೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಮಹಾರಾಷ್ಟ್ರ ಮೂಲದ ಹಿಂದೂ ಮುಖಂಡೆ ಸೇರಿದಂತೆ ಏಳು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಜನವರಿ 18ರಂದು ಅಖಂಡ ಹಿಂದೂ ಸಮ್ಮೇಳನದ ಭಾಗವಾಗಿ ಮೆರವಣಿಗೆ ನಡೆಸಲಾಗಿತ್ತು.
ದೂರಿನ ಪ್ರಕಾರ, ಸಮಾವೇಶಕ್ಕೂ ಮೊದಲು ಮೆರವಣಿಗೆ ನಡೆಸಲಾಯಿತು. ಅನ್ಸಾರಿ ದರ್ಗಾ ಬಳಿ ಮೆರವಣಿಗೆ ತಲುಪಿದಾಗ, ವಾಹನದ ಮೇಲೆ ನಿಂತಿದ್ದ ಹಿಂದೂ ಮುಖಂಡೆ ವಾಹನವನ್ನು ನಿಲ್ಲಿಸಲು ಹೇಳಿ ಇತರ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ.
ಅಲ್ಲದೆ ಹಿಂದೂ ಮುಖಂಡೆ ಸಮಾವೇಶದ ವೇಳೆ ಪ್ರಚೋದನಕಾರಿ ಮತ್ತು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ದೂರಿನ ಆಧಾರದ ಮೇಲೆ, ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸಮಾವೇಶದ ಆಯೋಜಕರ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಲಾಗಿದೆ.
Advertisement