ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ; ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚನೆ

ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲಿರುವಾಗಲೇ ತಮ್ಮ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಪ್ಪಿಕೊಂಡಿರುವ ವಿಡಿಯೋ ಈಗ ವೈರಲ್‌ ಆಗಿದ್ದು, ಇದು 1 ವರ್ಷದ ಹಿಂದೆ ಸೆರೆಯಾಗಿದ್ದ ವಿಡಿಯೋ ಎನ್ನಲಾಗಿದೆ.
ರಾಮಚಂದ್ರ ರಾವ್ ರಾಸಲೀಲೆ
ರಾಮಚಂದ್ರ ರಾವ್ ರಾಸಲೀಲೆ
Updated on

ಬೆಳಗಾವಿ: ಹಿರಿಯ ಐಪಿಎಸ್ ಅಧಿಕಾರಿ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್‌ ಅವರು ಕಚೇರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ವಿಡಿಯೋ ವೈರಲ್​​ ಆಗಿದ್ದು, ಈ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ.

ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲಿರುವಾಗಲೇ ತಮ್ಮ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಪ್ಪಿಕೊಂಡಿರುವ ವಿಡಿಯೋ ಈಗ ವೈರಲ್‌ ಆಗಿದ್ದು, ಇದು 1 ವರ್ಷದ ಹಿಂದೆ ಸೆರೆಯಾಗಿದ್ದ ವಿಡಿಯೋ ಎನ್ನಲಾಗಿದೆ.

ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ವಿಡಿಯೋ ಬಗ್ಗೆ ನನಗೆ ಬೆಳಗ್ಗೆಯಷ್ಟೇ ಗೊತ್ತಾಗಿದೆ. ಎಷ್ಟೇ ದೊಡ್ಡವರಾದ್ರು ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚಿಸಿದ್ದೇನೆ ಎಂದರು.

ರಾಮಚಂದ್ರ ರಾವ್ ರಾಸಲೀಲೆ
ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ನಾ ರಾವ್ ಮಲತಂದೆ ರಾಮಚಂದ್ರ ರಾವ್ DGP ಆಗಿ ಮರುನೇಮಕ!

ಈ ಹಿಂದೆ ತಮ್ಮ ಮಲಮಗಳು, ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿಯಾಗಿದ್ದಾರೆ ಎಂಬ ಆರೋಪ ಮೇಲೆ ರಾಮಚಂದ್ರ ರಾವ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು. ನಂತರ ಅವರನ್ನು ರಾಜ್ಯ ಸರ್ಕಾರ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಮರುನೇಮಕ ಮಾಡಿತ್ತು.

ರನ್ಯಾ ರಾವ್ ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲೂ ರಾಮಚಂದ್ರರಾವ್ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆಗ ಸರ್ಕಾರಕ್ಕೆ ಮುಜುಗರ ಆಗಿತ್ತು. ಈಗ ರಾಸಲೀಲೆ ವಿಡಿಯೋ ವೈರಲ್ ಆಗುತ್ತಲೇ ಮತ್ತೆ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ.

ರಾಮಚಂದ್ರ ರಾವ್ ರಾಸಲೀಲೆ
ಕಚೇರಿಯಲ್ಲೇ ರಾಮಚಂದ್ರರಾವ್ ಮಹಿಳೆ ಜೊತೆ ರಾಸಲೀಲೆ: ಆರೋಪ ಅಲ್ಲಗಳೆದ DGP, Video Viral

ಪರಮೇಶ್ವರ ಭೇಟಿಗೆ ಯತ್ನ

ವಿಡಿಯೋ ವೈರಲ್ ಆಗುತ್ತಿದ್ದಂತೆ, ರಾಮಚಂದ್ರ ರಾವ್ ಅವರು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ಧಾವಿಸಿದರು. ಆದರೆ ರಾವ್ ಭೇಟಿಗೆ ಪರಮೇಶ್ವರ ನಿರಾಕರಿಸಿದ್ದಾರೆ ಎನ್ನಲಾಗಿದೆ.

ಗೃಹ ಸಚಿವರ ಮನೆಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಇದು ಹೇಗೆ ಮತ್ತು ಯಾವಾಗ ನಡೆಯಿತು, ಯಾರು ಅದನ್ನು ಮಾಡಿದ್ದಾರೆಂದು ನಾನು ಯೋಚಿಸುತ್ತಿದ್ದೇನೆ. ಈ ಯುಗದಲ್ಲಿ ಏನು ಬೇಕಾದರೂ ಮಾಡಬಹುದು. ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದರು.

ನನ್ನ ವಿರುದ್ಧ ಷಡ್ಯಂತ್ರ

ವೈರಲ್ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ನಾನು ಕೂಡ ಇಂದು ಆ ವಿಡಿಯೋವನ್ನು ನೋಡಿದ್ದೇನೆ. ಅದು ಸಂಪೂರ್ಣವಾಗಿ ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಿದ ಅಥವಾ ಎಡಿಟ್ ಮಾಡಿದ ವಿಡಿಯೋ ಆಗಿದೆ. ನನ್ನ ವೃತ್ತಿಜೀವನಕ್ಕೆ ಕಪ್ಪುಚುಕ್ಕೆ ಹಚ್ಚಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ರೀತಿಯ ಷಡ್ಯಂತ್ರ ರೂಪಿಸಿವೆ' ಎಂದು ಸಮರ್ಥಿಸಿಕೊಂಡಿದ್ದಾರೆ.

"ಇದರಿಂದ ನನಗೆ ಆಘಾತವಾಗಿದೆ. ಇದೆಲ್ಲವೂ ಕಟ್ಟುಕಥೆ, ಸುಳ್ಳು ವಿಡಿಯೋ ಎಂದರು. ಅಲ್ಲದೆ ಮುಂದಿನ ಕ್ರಮದ ಬಗ್ಗೆ ಕೇಳಿದಾಗ, ಅವರು ತಮ್ಮ ವಕೀಲರೊಂದಿಗೆ ಈ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com