

ಬೆಂಗಳೂರು: ಅಬಕಾರಿ ಡಿಸಿಯೊಬ್ಬರು 25 ಲಕ್ಷ ರೂ. ಲಂಚ ಪಡೆದ ಪ್ರಕರಣದಲ್ಲಿ ಅಬಕಾರಿ ಸಚಿವರೂ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಸಚಿವ ಆರ್ ಬಿ ತಿಮ್ಮಾಪುರ ಅವರ ವಿರುದ್ಧ ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.
ಇತ್ತೀಚೆಗೆ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ ಅವರು ಬಾರ್ ಲೈಸೆನ್ಸ್ ನೀಡಲು 25 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದದ್ದರು. ಜಗದೀಶ್ ಸೇರಿದಂತೆ ಐವರು ಅಬಕಾರಿ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಸೋರಿಕೆಯಾದ ಆಡಿಯೋ ಕ್ಲಿಪ್‌ನಲ್ಲಿ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ ಅವರು, ಅಬಕಾರಿ ಸಚಿವರ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು ದೂರುದಾರ ಲಕ್ಷ್ಮಿನಾರಾಯಣ ಅವರು ಆರೋಪಿಸಿದ್ದಾರೆ.
ಬಹಿರಂಗವಾಗಿರುವ ಆಡಿಯೋ ಕ್ಲಿಪ್‌ನಲ್ಲಿ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ ಅವರು ಸಚಿವರ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿ ಅಬಕಾರಿ ಸಚಿವರ ವಿರುದ್ಧ ಲಕ್ಷ್ಮಿನಾರಾಯಣ ದೂರು ನೀಡಿದ್ದಾರೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಲಕ್ಷ್ಮಿನಾರಾಯಣ ಅವರು ಇಂದು ಲೋಕಾಯುಕ್ತ ಕಚೇರಿಗೆ ಆಗಮಿಸಿ ಸಚಿವ ತಿಮಾಪುರ ಹಾಗೂ ಪುತ್ರ, ಜಿಲ್ಲಾಧಿಕಾರಿ ಜಗದೀಶ್ ನಾಯಕ್ ಅವರ ಪಾತ್ರದ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಜಗದೀಶ್ ನಾಯಕ್ ಹಾಗೂ ಎಸ್‌ಪಿ ತಮಣ ಮತ್ತು ಕಾನ್‌ಸ್ಟೇಬಲ್ ಲಕ್ಕಪ್ಪ ಅವರುಗಳು ನಡೆಸಿರುವ ಆಡಿಯೋ ಸಂಭಾಷಣೆಯಲ್ಲಿ ಸಚಿವರು ಮತ್ತು ಅವರ ಪುತ್ರ ಲಂಚಕ್ಕೆ ಬೇಡಿಕೆ ಇಟ್ಟಿರುವುದನ್ನು ಸಾಕ್ಷಿಯಾಗಿ ಪರಿಗಣಿಸಬೇಕೆಂದು ಲಕ್ಷ್ಮಿನಾರಾಯಣ ಮನವಿ ಮಾಡಿದ್ದಾರೆ.
ಲಕ್ಷ್ಮಿನಾರಾಯಣ ಅವರು ಸಿಎಲ್-7 ಪರವಾನಗಿ ಮತ್ತು ಮೈಕ್ರೋ ಬ್ರೂವರಿ ಪರವಾನಗಿಗಾಗಿ ಅರ್ಜಿ ಸಲ್ಲಿಸಿದ್ದರು. ಇದಕ್ಕಾಗಿ ನಾಯಕ್ ಮತ್ತು ಇತರ ಇಬ್ಬರು ಆರೋಪಿಗಳು 80 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.
25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಮೂವರು ಅಬಕಾರಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.
Advertisement