

ಬಳ್ಳಾರಿ: ಪೋಕ್ಸೊ ಸಂತ್ರಸ್ತೆ ಹೆಸರು ಮತ್ತು ವಿಳಾಸ ಬಹಿರಂಗಪಡಿಸಿದ್ದ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬಳ್ಳಾರಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಮತ್ತು ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಭಾಷಣದ ವೇಳೆ ಸಂವೇದನಾ ಶೀಲ ವಿವರ ಉಲ್ಲೇಖಿಸಿ, ಪೋಕ್ಸೋ ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ದೂರಿನನ್ವಯ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪೋಕ್ಸೋ ಅಡಿಯಲ್ಲಿ ಕೇಸ್ ದಾಖಲಾಗಿದೆ.
ಜ.17ರಂದು ನಡೆದ ಬಿಜೆಪಿಯ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡುವಾಗ ಶ್ರೀರಾಮುಲು ಅವರು ಸಂತ್ರಸ್ತೆಯ ಹೆಸರು ಹಾಗೂ ವಿಳಾಸವನ್ನು ಬಹಿರಂಗಪಡಿಸಿದ್ದರು.
ಬಳ್ಳಾರಿ ಗಾಂಜಾ, ಡ್ರಗ್ಸ್ ಹಬ್ ಆಗಿದೆ. ಡ್ರಗ್ ಸೇವಿಸಿಯೇ ಶಾಲಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳುತ್ತಾ, ಪೋಕ್ಸೋ ಕೇಸ್‌ನ ಸಂತ್ರಸ್ತೆಯ ಹೆಸರು, ವಿಳಾಸ, ತರಗತಿ ಹಾಗೂ ಓದುವ ಶಾಲೆಯ ಹೆಸರನ್ನೂ ಬಗಿರಂಗಪಡಿಸಿದ್ದರು.
Advertisement